ಇಲಾಖೆಯಲ್ಲಿ ಶಿಸ್ತು ಉಲ್ಲಂಘನೆಗೆ ಅವಕಾಶವಿಲ್ಲ, ಭ್ರಷ್ಟಾಚಾರ, ರೌಡಿಗಳ ಜೊತೆ ನಂಟು ಕಂಡುಬಂದರೆ ಕಠಿಣ ಕ್ರಮ; ಪೊಲೀಸರಿಗೆ ನೂತನ ಆಯುಕ್ತರ ಎಚ್ಚರಿಕೆ..!

ಅಧಿಕಾರ ದುರುಪಯೋಗಪಡಿಸಿಕೊಳ್ಳುವುದು ಅಥವಾ ಅಪರಾಧ ಜಾಲಗಳೊಂದಿಗೆ ಶಾಮೀಲಾಗುವುದರ ವಿರುದ್ಧ ಎಚ್ಚರಿಕೆ ನೀಡಿದ ಅವರು, ಯಾರೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು. ಯಾವುದೇ ಕಾರಣಕ್ಕೂ ನಿಯಮ ಉಲ್ಲಂಘನೆಯನ್ನು ಸಹಿಸುವುದಿಲ್ಲ.
Newly-appointed Chief Commissioner of Police (CCoP) R Hithendra
ಹಿಂದಿನ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆರ್. ಹಿತೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
Updated on: 

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಉಲ್ಲಂಘನೆಗೆ ಅವಕಾಶವಿಲ್ಲ, ಅಕ್ರಮ ಚಟುವಟಿಕೆಗಳು, ಮಾಫಿಯಾ ಮತ್ತು ಅಪರಾಧಿಗಳೊಂದಿಗೆ ನಂಟು ಹೊಂದಿರುವುದು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೂತನ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು ಗುರುವಾರ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದ ಐವರು ನೂತನ ವಲಯ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿದ ಹಿತೇಂದ್ರ ಅವರು, ಕರ್ತವ್ಯದಲ್ಲಿ ಯಾವುದೇ ರೀತಿಯ ದುರ್ವರ್ತನೆ ಅಥವಾ ಶಿಸ್ತು ಉಲ್ಲಂಘನೆ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ಕರ್ತವ್ಯ ನಿರ್ವಹಿಸುವಾಗ ಶಿಸ್ತು, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಎಲ್ಲ ಪೊಲೀಸ್ ಸಿಬ್ಬಂದಿ ಪೊಲೀಸ್ ಕೈಪಿಡಿ, ಇಲಾಖೆಯ ನಿಯಮಾವಳಿಗಳು ಹಾಗೂ ಕಾನೂನು ಪ್ರಕ್ರಿಯೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ನಿರ್ದೇಶನ ನೀಡಿದರು.

ಅಧಿಕಾರ ದುರುಪಯೋಗಪಡಿಸಿಕೊಳ್ಳುವುದು ಅಥವಾ ಅಪರಾಧ ಜಾಲಗಳೊಂದಿಗೆ ಶಾಮೀಲಾಗುವುದರ ವಿರುದ್ಧ ಎಚ್ಚರಿಕೆ ನೀಡಿದ ಅವರು, ಯಾರೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು. ಯಾವುದೇ ಕಾರಣಕ್ಕೂ ನಿಯಮ ಉಲ್ಲಂಘನೆಯನ್ನು ಸಹಿಸುವುದಿಲ್ಲ ಎಂದು ಹೇಳಿದರು.

Newly-appointed Chief Commissioner of Police (CCoP) R Hithendra
ಬೆಂಗಳೂರು ನಗರ ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ಅಧಿಕಾರ ಸ್ವೀಕಾರ; ಕಾನೂನು ಸುವ್ಯವಸ್ಥೆ, ಸಂಚಾರ ನಿರ್ವಹಣೆ, ಮಾದಕ ವಸ್ತು ನಿಯಂತ್ರಣಕ್ಕೆ ಆದ್ಯತೆ; Video

ತಮ್ಮ ಸೂಚನೆಗಳನ್ನು ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸೇರಿದಂತೆ ಕೆಳಹಂತದ ಅಧಿಕಾರಿಗಳಿಗೂ ಸ್ಪಷ್ಟವಾಗಿ ತಲುಪಿಸಬೇಕು. ಆಯಾ ವ್ಯಾಪ್ತಿಗಳಲ್ಲಿ ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಐವರು ವಲಯ ಪೊಲೀಸ್ ಆಯುಕ್ತರು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಹೊಸ ಪೊಲೀಸ್ ವ್ಯವಸ್ಥೆಯಡಿ ರೌಡಿಸಂ ನಿಯಂತ್ರಿಸುವ ಪ್ರಯತ್ನಗಳ ಕುರಿತು ಮಾತನಾಡಿದ ಅವರು, ನಗರ ಮಟ್ಟದಲ್ಲಿ ಪ್ರತ್ಯೇಕ ರೌಡಿ ನಿಗ್ರಹ ದಳ ರಚನೆಯಾಗಿದೆ ಎಂಬ ಕಾರಣಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಎಚ್ಚರಿಸಿದರು.

ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿ, ಅವುಗಳನ್ನು ನಿಯಂತ್ರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X