ಮಂಗಳೂರು: ಹಿಂದೂ ಯುವಕನ ಜೊತೆ ಲವ್; ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್; ವಿಡಿಯೋ

ಅಪಹರಣಕ್ಕೊಳಗಾದ ಯುವತಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೆಡಿಕಲ್ ವಿದ್ಯಾರ್ಥಿನಿಯಾಗಿದ್ದು, ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಕಿಡ್ನಾಪ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕಾಲೇಜು ಆವರಣದಿಂದ ಯುವತಿ ಕಿಡ್ನಾಪ್
ಕಾಲೇಜು ಆವರಣದಿಂದ ಯುವತಿ ಕಿಡ್ನಾಪ್
Updated on: 

ಮಂಗಳೂರು: ಹಾಡಹಗಲೇ ಕಾಲೇಜು ಆವರಣದಿಂದಲೇ ವಿದ್ಯಾರ್ಥಿನಿಯೊಬ್ಬಳನ್ನು ಹಲವು ವ್ಯಕ್ತಿಗಳು ಬಲವಂತವಾಗಿ ಎಳೆದೊಯ್ದಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಈ ಕೃತ್ಯ ನಡೆದಿದ್ದು, ಅಪಹರಣದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.

ಅಪಹರಣಕ್ಕೊಳಗಾದ ಯುವತಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೆಡಿಕಲ್ ವಿದ್ಯಾರ್ಥಿನಿಯಾಗಿದ್ದು, ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯ ಕುಟುಂಬಸ್ಥರೇ ಕಾಲೇಜು ಆವರಣಕ್ಕೆ ಬಂದು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಹಲವು ವ್ಯಕ್ತಿಗಳು ಸೇರಿ ವಿದ್ಯಾರ್ಥಿನಿಯನ್ನು ಎಳೆದೊಯ್ದು ಥಾರ್ ವಾಹನಕ್ಕೆ ಹತ್ತಿಸಿಕೊಂಡು ಪರಾರಿಯಾಗುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ಕಾಲೇಜು ಆವರಣದಿಂದ ಯುವತಿ ಕಿಡ್ನಾಪ್
ಪಾಕಿಸ್ತಾನ: ಹಾಡಹಗಲೇ ಕಾರಿನ ಮೇಲೆ AK-47ನಿಂದ ದಾಳಿ ನಡೆಸಿ ಮುಸುಕುದಾರಿಗಳಿಂದ ಸಚಿವನ ಕಿಡ್ನಾಪ್, Video

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿ, ಯುವತಿಯನ್ನು ಆಕೆಯ ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿರುವ ಆರೋಪವಿದ್ದು, ಇದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.

ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಮತ್ತು ಯಾರೊಂದಿಗೆ ವಾಸಿಸಬೇಕು ಎಂದು ನಿರ್ಧರಿಸುವ ಸಂಪೂರ್ಣ ಕಾನೂನುಬದ್ಧ ಹಕ್ಕು ಆಕೆಗಿದೆ.

ಘಟನೆ ನಡೆದ ತಕ್ಷಣವೇ ಕಾಲೇಜು ಆಡಳಿತ ಮಂಡಳಿ ಅಥವಾ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಅಪಹರಣಕಾರರ ವಾಹನವು ನಗರದಿಂದ ದೂರ ಹೋಗುವ ಮೊದಲೇ ತಡೆದು ನಿಲ್ಲಿಸಿ ಯುವತಿಯನ್ನು ರಕ್ಷಿಸಬಹುದಿತ್ತು ಎಂದು ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X