ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್: ಕೃಪಾ ಆಳ್ವಾ, ರಾಕೇಶ್ ಶೆಟ್ಟಿಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾ, ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆ ಎದುರಿಸುತ್ತಿರುವ ಕೃಪಾ ಆಳ್ವಾ, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ಸೇರಿದಂತೆ ಆರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ವಜಾಗೊಳಿಸಿದೆ.
kripa alwa and siddaramaiah
ಕೃಪಾ ಆಳ್ವಾ ಮತ್ತು ಸಿದ್ದರಾಮಯ್ಯ
Updated on: 

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಸೇರಿದಂತೆ ಆರು ಆರೋಪಿಗಳಿಗೆ ಕೋರ್ಟ್ ಶುಕ್ರವಾರ ಬಿಗ್ ಶಾಕ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆ ಎದುರಿಸುತ್ತಿರುವ ಕೃಪಾ ಆಳ್ವಾ, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ಸೇರಿದಂತೆ ಆರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ವಜಾಗೊಳಿಸಿದೆ.

ಕೃಪಾ ಆಳ್ವಾ, ಜೆಡಿಎಸ್ ಸೋಷಿಯಲ್ ಮೀಡಿಯಾ ಕಾರ್ಯಕರ್ತ ಪ್ರಜ್ವಲ್ ಪ್ರಸಾದ್, ಚಂದನ್ ಎಚ್‌.ಎಸ್, ಕೆವಿ ಪ್ರಶಾಂತ್ ಕುಮಾರ್, ವಿನೋದ್ ಕುಮಾರ್ ಸೇರಿ 6 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಆರೋಪಿಗಳಿಗೆ ಬಂಧನ ಭೀತಿ ಎದುರಾಗಿದ್ದು, ಸಿಸಿಬಿ ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.

kripa alwa and siddaramaiah
ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣ: ಸಿಸಿಬಿ ವಿಚಾರಣೆಗೆ ಕೃಪಾ ಆಳ್ವ ಹಾಜರು!

ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಕೃಪಾ ಆಳ್ವಾ ಅವರೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರು ಬಂಧನದ ಭೀತಿಯಿಂದ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಹಿರಂಗವಾಗಿಯೇ ಕೃಪಾ ಆಳ್ವಾರ ಹೆಸರು ಹೇಳಿದ್ದರು. ಇದರ ಬೆನ್ನಲ್ಲೇ ಕೃಪಾ ಖುದ್ದಾಗಿ ಸಿಸಿಬಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಇದೀಗ ಕೋರ್ಟ್ ಕೃಪಾ ಆಳ್ವಾ ಅರ್ಜಿ ವಜಾ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X