ಮಂಡ್ಯ: ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ಯುವಕ; Video

ಇಂದು ಬೆಳಿಗ್ಗೆ ಮಂಡ್ಯದ ಮಹಾವೀರ ವೃತ್ತದಲ್ಲಿ ಮುಸ್ಲಿಂ ಯುವಕನೊಬ್ಬ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸ್ ಮುಂದೆ 'ಅಲ್ಲಾಹು ಅಕ್ಬರ್' ಘೋಷಣೆಗಳನ್ನು ಕೂಗಿ ಸ್ಥಳದಿಂದ ಪರಾರಿಯಾದ ಘಟನೆ ನಡೆದಿದೆ.
ರಸ್ತೆ ಮಧ್ಯೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಯುವಕ
ರಸ್ತೆ ಮಧ್ಯೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಯುವಕ
Updated on: 

ಮಂಡ್ಯ: ಇಂದು ಬೆಳಿಗ್ಗೆ ಮಂಡ್ಯದ ಮಹಾವೀರ ವೃತ್ತದಲ್ಲಿ ಮುಸ್ಲಿಂ ಯುವಕನೊಬ್ಬ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸನ್ನು ಅಡ್ಡಗಟ್ಟಿ ಧಾರ್ಮಿಕ ಘೋಷಣೆಗಳನ್ನು ಕೂಗಿ ಸ್ಥಳದಿಂದ ಪರಾರಿಯಾದ ಘಟನೆ ನಡೆದಿದೆ. ಇದರಿಂದಾಗಿ ಅಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂಚಾರ ದಟ್ಟಣೆ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟ್ರಾಫಿಕ್ ನಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಯುವಕನೊಬ್ಬ, ನಿಂತಿದ್ದ ಬಸ್ಸಿನ ಮುಂಭಾಗದಲ್ಲಿಯೇ ತನ್ನ ವಾಹನವನ್ನು ನಿಲ್ಲಿಸಿ, ಬಸ್ಸಿನ ಮುಂದೆ ನಿಂತು ಜೋರಾಗಿ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿದ್ದವರು ಆತಂಕಕ್ಕೊಳಗಾದರು. ಘೋಷಣೆ ಕೂಗಿದ ನಂತರ, ಆ ಯುವಕ ತನ್ನ ಬೈಕ್ ನಲ್ಲಿ ಅಲ್ಲಿಂದ ವೇಗವಾಗಿ ಪರಾರಿಯಾಗಿದ್ದನು.

ಘಟನೆಯನ್ನು ಖಚಿತಪಡಿಸಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಶೋಭಾ ರಾಣಿ ಅವರು, ಪೊಲೀಸರು ಕೂಡಲೇ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು. ಆರೋಪಿಯನ್ನು ಹಾಲಹಳ್ಳಿ ಗ್ರಾಮದ ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ.

ರಸ್ತೆ ಮಧ್ಯೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಯುವಕ
ಬಸವ ಮಂಟಪ ಕೃತಿ ವಿವಾದ: ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಸ್ಥಾನದಿಂದ ಶಂಕರ್ ಬಿದರಿ ವಜಾಕ್ಕೆ ಆಗ್ರಹ!

ಉಮರ್ ಫಾರೂಕ್ ಮಾನಸಿಕ ಅಸ್ವಸ್ಥರಂತೆ ಕಂಡುಬರುತ್ತಿದ್ದು, ಪ್ರಾಥಮಿಕ ವಿಚಾರಣೆ ವೇಳೆ 'ತನ್ನೊಳಗೆ ದೇವರು ಪ್ರವೇಶಿಸಿದ್ದನು' ಎಂದು ಹೇಳಿಕೊಂಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ. ಅಲ್ಲದೆ, ಆತ ತನ್ನ ಎರಡನೇ ಪತ್ನಿಯೊಂದಿಗೆ ಕೌಟುಂಬಿಕ ವಿವಾದವನ್ನು ಹೊಂದಿದ್ದು, ಈ ಸಂಬಂಧ ಪತ್ನಿ ಈ ಹಿಂದೆಯೇ ಆತನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಆತ ಕಳೆದ ಕೆಲವು ದಿನಗಳಿಂದ ಅಸಹಜವಾಗಿ ವರ್ತಿಸುತ್ತಿದ್ದನು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಉಮರ್ ಫಾರೂಕ್ ನ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸಲು ವೈದ್ಯಕೀಯ ತಪಾಸಣೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ವರದಿ ಮತ್ತು ನಡೆಯುತ್ತಿರುವ ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X