ದೆಹಲಿ ಭೇಟಿ ಹಿಂದೆ ಯಾವುದೇ ರಾಜಕೀಯ ಗುಟ್ಟಿಲ್ಲ, ಈ ವಿಚಾರದಲ್ಲಿ ರಾಜಕೀಯ ಚರ್ಚೆ ಅನಗತ್ಯ: ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿ ತೆರೆ

ಇತ್ತೀಚೆಗೆ ಹಿರಿಯೂರಿನಲ್ಲಿ ನಡೆದ ಸಮುದಾಯವಾರು ಸಭೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಹಲವು ನಾಯಕರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ತಾವೂ ಈ ಸಭೆಗಳಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.
Minister Satish Jarkiholi
ಸತೀಶ್ ಜಾರಕಿಹೊಳಿ
Updated on: 

ಬೆಳಗಾವಿ: ದೆಹಲಿ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ರಾಷ್ಟ್ರ ರಾಜಧಾನಿಗೆ ತೆರಳಿದಾಗ ಪಕ್ಷದ ಹಿರಿಯ ನಾಯಕರು ಹಾಗೂ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ ಪ್ರಕ್ರಿಯೆ. ಇದಕ್ಕೆ ಯಾವುದೇ ರಾಜಕೀಯ ಮಹತ್ವ ಕಲ್ಪಿಸುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.

ಶುಕ್ರವಾರ ನವದೆಹಲಿಗೆ ಭೇಟಿ ನೀಡಿದ್ದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಆಗಾಗ್ಗೆ ದೆಹಲಿಗೆ ತೆರಳುತ್ತಾರೆ. ಇಂತಹ ಸಂದರ್ಭಗಳಲ್ಲಿ ಸಾಧ್ಯವಾದಾಗ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗುವುದು ಸಹಜ ಎಂದು ಹೇಳಿದರು.

ಬಳಿಕ ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಮುಂಬರುವ ಚುನಾವಣೆಗಳ ಸಿದ್ಧತೆ ಕುರಿತು ಮಾತನಾಡಿದ ಅವರು, ಪಕ್ಷವನ್ನು ಬಲಪಡಿಸುವುದು ಎಲ್ಲ ನಾಯಕರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ಹಿರಿಯೂರಿನಲ್ಲಿ ನಡೆದ ಸಮುದಾಯವಾರು ಸಭೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಹಲವು ನಾಯಕರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ತಾವೂ ಈ ಸಭೆಗಳಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ಈ ಹಿಂದೆ ಹಲವು ಉಪಚುನಾವಣೆಗಳನ್ನು ಎದುರಿಸಿದ್ದೇವೆ. ಆಗಲೂ ಸಮುದಾಯವಾರು ಹಾಗೂ ಜಿಲ್ಲಾ ಮಟ್ಟದ ಸಭೆಗಳನ್ನು ನಿರಂತರವಾಗಿ ನಡೆಸಿದ್ದೇವೆ. ಪಕ್ಷವನ್ನು ಸಂಘಟಿಸಿ ಯಶಸ್ಸಿನತ್ತ ಕೊಂಡೊಯ್ಯುವುದು ಪ್ರತಿಯೊಬ್ಬ ನಾಯಕನ ಜವಾಬ್ದಾರಿ ಎಂದು ಹೇಳಿದರು.

Minister Satish Jarkiholi
'ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ಸಿಗಲಿ, ಆರ್ಥಿಕವಾಗಿ ಸಬಲ ಕಾರ್ಖಾನೆಗಳು ಹೆಚ್ಚು ದರ ನೀಡಲಿ': ಸತೀಶ್ ಜಾರಕಿಹೊಳಿ

ಇದೇ ವೇಳೆ ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯ ಸೋಲಿನಿಂದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆತಂಕ ಸೃಷ್ಟಿಯಾಗಿದೆ ಎಂಬ ಮಾತುಗಳನ್ನು ತಳ್ಳಿಹಾಕಿದ ಅವರು, ಚುನಾವಣಾ ಫಲಿತಾಂಶ ಪಕ್ಷಕ್ಕೆ ದೊಡ್ಡ ಹಿನ್ನಡೆಯಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ನಡೆದ ಎಲ್ಲ ಉಪಚುನಾವಣೆಗಳಲ್ಲೂ ನಾವು ಗೆಲುವು ಸಾಧಿಸಿದ್ದೇವೆ. ಇತ್ತೀಚಿನ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದೆವು. ಪ್ರತಿಪಕ್ಷಗಳು ಮೂರು ಸ್ಥಾನಗಳನ್ನು ಗೆದ್ದರೆ, ನಾವು ಒಂದು ಸ್ಥಾನವನ್ನು ಗೆದ್ದಿದ್ದೇವೆ. ಕೇವಲ ಒಂದು ಸ್ಥಾನ ಸೋತಿದ್ದೇವೆ ಎಂಬ ಕಾರಣಕ್ಕೆ ಇದನ್ನು ದೊಡ್ಡ ಸೋಲು ಅಥವಾ ಆತಂಕದ ವಿಚಾರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ವ್ಯಕ್ತಪಡಿಸಿರುವ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿ, ಹಿರಿಯ ನಾಯಕರು ತಮ್ಮ ಅಸಮಾಧಾನದಿಂದ ಹೊರಬರಲು ಸ್ವಲ್ಪ ಸಮಯ ಬೇಕಾಗಬಹುದು. ಮಹದೇವಪ್ಪ ಅವರು ಸಹಜ ಸ್ಥಿತಿಗೆ ಮರಳಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X