

ಕೊರಟಗೆರೆ: ತುಮಕೂರು ಜಿಲ್ಲೆ ಕೊರಟಗೆರೆ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ತಾಲ್ಲೂಕಿನ ತುಂಬಾಡಿ ಪೆಟ್ರೋಲ್ ಬಳಿ ಹಸುವೊಂದು ರಸ್ತೆಗೆ ಅಡ್ಡ ಬಂದಿದ್ದರಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಹಳ್ಳಕ್ಕೆ ಬಿದಿದ್ದೆ.
ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಾವಗಡೆಯಿಂದ ತುಮಕೂರಿನ ಕಡೆಗೆ ಖಾಸಗಿ ಬಸ್ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಹಸು ಏಕಾಏಕಿ ಅಡ್ಡ ಬಂದ ಪರಿಣಾಮ ಖಾಸಗಿ ಬಸ್ ನಿಯಂತ್ರಣ ತಪ್ಪಿದೆ. ಚಾಲಕ ಕಾರೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬಸ್ ರಸ್ತೆ ಬದಿಯ ಹಳಕ್ಕೆ ಬಿದ್ದಿದೆ. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.
ಅದೃಷ್ಟವಶಾತ್, ದೊಡ್ಡ ಅನಾಹುತವೊಂದು ತಪ್ಪಿದೆ. ಆದಾಗ್ಯೂ, ಕೆಲವರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.
ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.