ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಲೇಖಕ ರವಿ ಹಂಜ್ ರನ್ನು ಗಡೀಪಾರು ಮಾಡಬೇಕು: ಶಾಸಕ ವಿನಯ್ ಕುಲಕರ್ಣಿ; Video

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಲಕರ್ಣಿ, ರವಿ ಹಂಜ್ ಅವರು ಅನಿವಾಸಿ ಭಾರತೀಯರಾಗಿದ್ದು (NRI), ಅವರಿಗೆ ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರಿಗೂ ದೇಶದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
Ravi Hanj
ರವಿ ಹಂಜ್
Updated on: 

ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ರವಿ ಹಂಜ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಶಾಸಕ ವಿನಯ್ ಕುಲಕರ್ಣಿ ಒತ್ತಾಯಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಲಕರ್ಣಿ, ರವಿ ಹಂಜ್ ಅವರು ಅನಿವಾಸಿ ಭಾರತೀಯರಾಗಿದ್ದು (NRI), ಅವರಿಗೆ ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರಿಗೂ ದೇಶದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

Ravi Hanj
ಅಮೆರಿಕದಲ್ಲಿದ್ದೇನೆ ಎಂದು ಬಿಂಬಿಸಲು ಯತ್ನಿಸಿದ್ದ ರವಿ ಹಂಜ್; ನೋಟಿಸ್ ಜಾರಿ, ರಾಯಭಾರ ಕಚೇರಿಗೂ ಮಾಹಿತಿ: ಖರ್ಗೆ

ಲಿಂಗಾಯತ ಸಮುದಾಯದ ಮೌನದ ಲಾಭ ಪಡೆದುಕೊಂಡು ಹಂಜ್ ಅವರಂತಹವರು ಸಮಾಜ ಸುಧಾರಕರ ಕುರಿತು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಂಜ್ ಅವರ ಹಿನ್ನೆಲೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ವಿವಾದಾತ್ಮಕ ಬರಹ ಬರೆಯುವಂತೆ ಅವರಿಗೆ ಸೂಚನೆ ನೀಡಿದವರು ಯಾರು ಎಂಬುದನ್ನು ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಆ ಬರಹವನ್ನು ಬೇರೆಯವರು ರಚಿಸಿ ಹಂಜ್ ಅವರ ಹೆಸರಿನಲ್ಲಿ ಪ್ರಕಟಿಸಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸುವಂತೆ ಒತ್ತಾಯಿಸಿದರು.

ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಬೇಕು ಎಂದು ವಿನಯ್ ಕುಲಕರ್ಣಿ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X