Bharat Jodo Yojana ಲಾಭ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಸೀಮಿತ; BJP-JDSಗೆ ನಿರ್ಬಂಧ: ಅಶೋಕ್ ಆರೋಪ

ಭಾರತ್ ಜೋಡೋ ಯೋಜನೆಯಡಿ ಬೆಂಗಳೂರಿನ ಪ್ರತಿ ವಾರ್ಡ್‌ಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ನ ಕಾರ್ಯಕ್ರಮವಾಗಿದ್ದು, ಯೋಜನೆಯ ಸಮಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಇರಬಾರದು ಎಂದು ಸಚಿವರು ಸೂಚನೆ ನೀಡಿದ್ದಾರೆ.
DK Shivkumar and R.Ashok
ಡಿ.ಕೆ ಶಿವಕುಮಾರ್ ಮತ್ತು ಆರ್.ಅಶೋಕ್
Updated on: 

ಬೆಂಗಳೂರು: ರಾಜ್ಯ ಸರ್ಕಾರದ ಭಾರತ್ ಜೋಡೋ ಯೋಜನೆಯ ಲಾಭ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಸಿಗುತ್ತಿದ್ದು, ಇತರ ಪಕ್ಷಗಳ ಸದಸ್ಯರನ್ನು ಯೋಜನೆಯ ವ್ಯಾಪ್ತಿಗೆ ಸೇರಿಸದಂತೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯೋಜನೆಯಡಿ ಬೆಂಗಳೂರಿನ ಪ್ರತಿ ವಾರ್ಡ್‌ಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ನ ಕಾರ್ಯಕ್ರಮವಾಗಿದ್ದು, ಯೋಜನೆಯ ಸಮಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಇರಬಾರದು ಎಂದು ಸಚಿವರು ಸೂಚನೆ ನೀಡಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ನಾಯಕ, ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ರಾಜ್ಯದ ಜನರಿಗೆ ಮಾಡುವ ದ್ರೋಹವಾಗಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರೂ ಅವರ ಗೌರವಧನ ಹೆಚ್ಚಳ ಮಾಡಿಲ್ಲ. ಕಸ ವಿಲೇವಾರಿ ಗುತ್ತಿಗೆದಾರರಿಗೂ ಹಣ ಪಾವತಿಸಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ನಮ್ಮ ಕ್ಲಿನಿಕ್‌ಗಳ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ ಎಂದು ದೂರಿದರು.

ಬೆಲೆ ಏರಿಕೆ ವಿರುದ್ಧ ನವೆಂಬರ್ 23, 24 ಮತ್ತು 25ರಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು

DK Shivkumar and R.Ashok
ಹಿರಿಯೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್‌ಗೆ ಪೈಪೋಟಿ; ಜೆಡಿಎಸ್ ಮನವೊಲಿಸುವ ವಿಶ್ವಾಸವಿದೆ ಎಂದ ಆರ್. ಅಶೋಕ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X