ರೇಣುಕಾಸ್ವಾಮಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ವಿಚಾರಣೆ ಮುಂದೂಡಿಕೆ
ಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.
ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ತಮ್ಮ ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹೊರಗಿನ ಖಾಸಗಿ ಆಸ್ಪತ್ರೆಗೆ ತಮ್ಮನ್ನು ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ವಿಶೇಷ ಸೌಲಭ್ಯಗಳಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಆರೋಗ್ಯದ ವಿಚಾರವಾಗಿರುವುದರಿಂದ ಅರ್ಜಿಯನ್ನ ತುರ್ತಾಗಿ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



