ರಾಜ್ಯ

'ಬಸವ ಮಂಟಪ' ಕೃತಿ ವಿವಾದ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಹಂಜ್

'ಬಸವ ಮಂಟಪ' ಕೃತಿ ವಿವಾದ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಹಂಜ್
ಲೇಖಕ ರವಿ ಹಂಜ್
Published On :

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಹಾಗೂ ಅವರ ವಚನಗಳನ್ನು ಅವಮಾನಿಸಿದ ಆರೋಪ ಎದುರಿಸುತ್ತಿರುವ 'ಬಸವ ಮಂಟಪ' ಕೃತಿ ಲೇಖಕ, ಅನಿವಾಸಿ ಭಾರತೀಯ, ದಾವಣಗೆರೆ ಮೂಲದ ರವಿ ಹಂಜಗಿಮಠ್ (ರವಿ ಹಂಜ್) ಅವರು ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವಿವಾದಾತ್ಮಕ 'ಬಸವ ಮಂಟಪ' ಪುಸ್ತಕಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ರವಿ ಹಂಜಿಗಿಮಠ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ದೂರುದಾರ ಅರವಿಂದ ಜತ್ತಿ ಮತ್ತು ಹೈಗ್ರೌಂಡ್ಸ್ ಠಾಣೆಯ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

'ಬಸವ ಮಂಟಪ' ಪುಸ್ತಕದಲ್ಲಿ ಉಲ್ಲೇಖಿಸಿರುವ ಅಂಶಗಳು ತಮ್ಮ ಸ್ವಂತ ಅಭಿಪ್ರಾಯವಲ್ಲ. ಅವು ಬಿ.ಎಲ್.ರೈಸ್ ಅವರ 'ಮೈಸೂರು ಗೆಜೆಟಿಯರ್', ಬಸವ ಪುರಾಣ ಹಾಗೂ ಡಾ.ಎಂ.ಎಂ.ಕಲ್ಬುರ್ಗಿ ಸೇರಿದಂತೆ ಹಲವು ವಿದ್ವಾಂಸರ ಸಂಶೋಧನಾ ಕೃತಿಗಳನ್ನು ಆಧರಿಸಿವೆ ಎಂದು ರವಿ ಹಂಜ್ ಹೇಳಿದ್ದಾರೆ.

ಐತಿಹಾಸಿಕ ಮತ್ತು ಸಾಹಿತ್ಯಿಕ ವಿಮರ್ಶೆ ನಡೆಸುವುದು ಸಂವಿಧಾನದ 19(1)(ಎ) ವಿಧಿಯಡಿ ಬರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುತ್ತದೆ. ಬಸವಣ್ಣನವರನ್ನಾಗಲಿ ಅಥವಾ ಲಿಂಗಾಯತ ಸಮುದಾಯವನ್ನಾಗಲಿ ಅವಮಾನಿಸುವ ಉದ್ದೇಶ ತಮಗಿಲ್ಲ. ಬಸವ ಸಮಿತಿಗೆ ಸರ್ಕಾರದಿಂದ ಮಂಜೂರಾಗಿರುವ ಭೂಮಿಯ ದುರ್ಬಳಕೆ ಕುರಿತು ತಾವು ಬರೆದಿದ್ದ ಲೇಖನಕ್ಕೆ ಪ್ರತೀಕಾರವಾಗಿ ದೂರುದಾರರು ರಾಜಕೀಯ ಪ್ರಭಾವ ಬಳಸಿ ಈ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಲುಕ್‌ಔಟ್ ನೋಟಿಸ್ ಆಧಾರದ ಮೇಲೆ ನವೆಂಬರ್ 21ರಂದು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮ್ಮನ್ನು ಕೊಂದವರಿಗೆ 5 ಲಕ್ಷ ರೂ ಬಹುಮಾನ ನೀಡುವುದಾಗಿ ವ್ಯಕ್ತಿಯೊಬ್ಬರು ಬಹಿರಂಗವಾಗಿ ಘೋಷಣೆ ಮಾಡಿದ್ದು, ಇದು ಸಂವಿಧಾನದ 21ನೇ ವಿಧಿಯ ಜೀವಿಸುವ ಹಕ್ಕಿಗೆ ಧಕ್ಕೆ ತಂದಿದೆ. ಸರ್ಕಾರದ ಮೂವರು ಸಚಿವರು ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧ ಆರೋಪ ಮಾಡಿರುವುದರಿಂದ ಹಾಗೂ ಮುಖ್ಯಮಂತ್ರಿಗಳು ಬಹಿರಂಗ ಹೇಳಿಕೆ ನೀಡಿರುವುದರಿಂದ ಪೊಲೀಸ್ ತನಿಖೆಯು ಒತ್ತಡಕ್ಕೆ ಒಳಗಾಗಿ ನಿಷ್ಪಕ್ಷಪಾತವಾಗಿ ನಡೆಯುವ ಸಾಧ್ಯತೆಯಿಲ್ಲ. ಅದ್ದರಿಂದ ತನ್ನ ವಿರುದ್ಧ ದಾಖಲಾಗಿರುವ ಎಫ್​ಐಅರ್ ಅನ್ನು ರದ್ದುಗೊಳಿಸಬೇಕು ಎಂದು ರವಿ ಹಜ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.