ರಾಜ್ಯ

ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ; ತಲೆಮರೆಸಿಕೊಂಡಿದ್ದ ಅರ್ಚಕ ಕೊನೆಗೂ ಬಂಧನ; ಯಾರು ಈ ಕೃಷ್ಣಮಾಚಾರಿ?

ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ; ತಲೆಮರೆಸಿಕೊಂಡಿದ್ದ ಅರ್ಚಕ ಕೊನೆಗೂ ಬಂಧನ; ಯಾರು ಈ ಕೃಷ್ಣಮಾಚಾರಿ?
ಲಕ್ಷ್ಮೀಪೂಜೆ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪಿ ಬಂಧನ
Published On :

ಬಳ್ಳಾರಿ: ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಹಾಗೂ ಲೈಂಗಿಕವಾಗಿ ಶೋಷಿಸಿದ ಆರೋಪದ ಮೇಲೆ ಅರ್ಚಕ ಕಮ್ಮಾರ ಕೃಷ್ಣಮಾಚಾರಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿಯಲ್ಲಿ ಯುವತಿಯರ ಲೈಂಗಿಕ ಶೋಷಣೆ ಹಾಗೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಸಂಬಂಧ ನವೆಂಬರ್ 10ರಂದು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬೆಳವಣಿಗೆ ಬೆನ್ನಲ್ಲೇ ಪ್ರಕರಣದ ಆರೋಪಿಗಳೆಲ್ಲಾ ಪರಾರಿಯಾಗಿದ್ದರು. ಪ್ರಮುಖವಾಗಿ ಪ್ರಕರಣದ ಪ್ರಮುಖ ರೂವಾರಿ ಕಮ್ಮಾರ ಕೃಷ್ಣಮಾಚಾರಿ ನಾಪತ್ತೆಯಾಗಿದ್ದ.

ಇದೀಗ ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆತನನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆಂಧ್ರಪ್ರದೇಶದ ಶ್ರೀಶೈಲಂಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಕ ಪಡೆ ಜಂಟಿ ಕಾರ್ಯಾಚರಣೆ

ಇನ್ನು ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮತ್ತು ಅಕ್ಕ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಯ ಪತ್ತೆಗಾಗಿ ತಾಂತ್ರಿಕ ಮಾಹಿತಿ ಹಾಗೂ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಹುಡುಕಾಟ ನಡೆಸಲಾಗಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪಿ ವಿವಿಧೆಡೆ ಸಂಚರಿಸುತ್ತಿದ್ದ ಎನ್ನಲಾಗಿದೆ.

ಧಾರ್ಮಿಕ ತಾಣಗಳಿಗೆ ಪರಾರಿ

ಆರೋಪಿ ಕಮ್ಮಾರ ಕೃಷ್ಣಮಾಚಾರಿ ಶಬರಿಮಲೆ, ವಿಜಯವಾಡ ಮತ್ತು ತಿರುಪತಿ ನಡುವೆ ಓಡಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೀಗ ಆಂಧ್ರಪ್ರದೇಶದ ಶ್ರೀಶೈಲಂಗೆ ಬಸ್‌ನಲ್ಲಿ ತೆರಳುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮೊಬೈಲ್ ಟವರ್ ಲೊಕೇಶನ್ ಹಾಗೂ ಇತರ ತಾಂತ್ರಿಕ ಸುಳಿವುಗಳ ಆಧಾರದ ಮೇಲೆ ಆತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

ಪ್ರಕರಣದಲ್ಲಿ ಯುವತಿಯರನ್ನು ಲಕ್ಷ್ಮೀ ಪೂಜೆಯ ಹೆಸರಿನಲ್ಲಿ ಬಳಸಿಕೊಂಡು ಲೈಂಗಿಕ ಶೋಷಣೆ ನಡೆಸಿರುವ ಆರೋಪಗಳಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.