ರಾಜ್ಯ

ಚಿಕ್ಕಮಗಳೂರಲ್ಲಿ ಕಾಂಗ್ರೆಸ್​​ಗೆ ಬಿಗ್​ ಶಾಕ್: 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!

ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು ಇದರ ಬೆನ್ನಲ್ಲೇ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಚಿಕ್ಕಮಗಳೂರಲ್ಲಿ ಕಾಂಗ್ರೆಸ್​​ಗೆ ಬಿಗ್​ ಶಾಕ್: 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!
ಸಂಗ್ರಹ ಚಿತ್ರ
Published On :

ಚಿಕ್ಕಮಗಳೂರು: ಕಾಡಾನೆ ಸ್ಥಳಾಂತರ ವಿಚಾರ ಇದೀಗ ಕಾಂಗ್ರೆಸ್ ನಲ್ಲಿ ಜಟಾಪಟಿಗೆ ಕಾರಣವಾಗಿದೆ. ಹಾಸನದಿಂದ ಚಿಕ್ಕಮಗಳೂರಿನ ಭದ್ರಾ ಅಭಯಾರಣಕ್ಕೆ ಕಾಡಾನೆ ಸ್ಥಳಾಂತರ ವಿರುದ್ಧ ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು ಇದರ ಬೆನ್ನಲ್ಲೇ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಮುಖಂಡರು ಹಾಗೂ ಕಾರ್ಯಕರ್ತರು ಶಾಕ್ ನೀಡಿದ್ದಾರೆ. ಸಣ್ಣಪುಟ್ಟ ಕೆಲಸ ಕಾರ್ಯಗಳಿಗಾಗಿ ಶಾಸಕರ ಬಳಿ ಹೋದರೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ಸರಿಯಾದ ಗೌರವ ಸಿಗುತ್ತಿಲ್ಲ ಎಂದು ಮುಖಂಡರು ಆರೋಪ ಮಾಡಿದ್ದಾರೆ. ಚುನಾವಣೆಗಳಲ್ಲಿ ನಮ್ಮನ್ನು ಬಳಸಿಕೊಳ್ಳುತ್ತಾರೆ. ಬಳಿಕ ನಮ್ಮ ಕುಂದುಕೊರತೆಗಳನ್ನು ಆಲಿಸುವುದಿಲ್ಲ ಎಂದು ಆರೋಪಿಸಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಜಿಲ್ಲಾ ಹಾಗೂ ಗ್ರಾಮ ಪಂಚಾಯತ್​ ಚುನಾವಣೆ ಸಮಯದಲ್ಲೇ ಮುಖಂಡರ ರಾಜೀನಾಮೆ ಕಾಂಗ್ರೆಸ್​​ಗೆ ದೊಡ್ಡ ಆಘಾತ ನೀಡಿದೆ. ಕೊಪ್ಪ ಜಲದುರ್ಗ ಬೂತ್ ಸಮಿತಿಯ ಅಧ್ಯಕ್ಷ ಐನಾರ್ ಹಾಗೂ ಸಂದೀಪ್‌ ನೇತೃತ್ವದಲ್ಲಿ ರಾಜೀನಾಮೆ ಸಲ್ಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.