ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೋಚಕ ತಿರುವು: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಮತ್ತಿಬ್ಬರು ಸಾಕ್ಷಿಗಳು; ಹೇಳಿದ್ದೇನು?
ನಿನ್ನೆ ಪ್ರಕರಣದ ಇಬ್ಬರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹಿಂದಿನ ಹೇಳಿಕೆಗಳಿಗೆ ತದ್ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ರೋಚಕ ತಿರುವು ಪಡೆದುಕೊಂಡಿದ್ದು, ಮಂಗಳವಾರ ಕೋರ್ಟ್ ನಲ್ಲಿ ಮತ್ತಿಬ್ಬರು ಸಾಕ್ಷಿಗಳು ಉಲ್ಟಾ ಹೊಡೆದಿದ್ದಾರೆ.
ನಿನ್ನೆ ಪ್ರಕರಣದ ಇಬ್ಬರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹಿಂದಿನ ಹೇಳಿಕೆಗಳಿಗೆ ತದ್ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು. ಇಂದು ಮತ್ತೆ ಇಬ್ಬರು ಪ್ರಮುಖ ಸಾಕ್ಷಿಗಳಾಗಿದ್ದ ಪಟ್ಟಣಗೆರೆ ಶೆಡ್‌ನ ಕೆಲಸಗಾರರು ನ್ಯಾಯಾಲಯದಲ್ಲಿ ತಮ್ಮ ಮೊದಲಿನ ಹೇಳಿಕೆಯಿಂದ ಹಿಂದೆ ಸರಿದು ಪ್ರತಿಕೂಲ ಸಾಕ್ಷಿಗಳಾಗಿ ಬದಲಾಗಿದ್ದಾರೆ.
ಪಟ್ಟಣಗೆರೆ ಶೆಡ್‌ನಲ್ಲಿ ಪಾರ್ಕಿಂಗ್ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷದರ್ಶಿ ಮಲ್ಲಿಕಾರ್ಜುನ್ ಹಾಗೂ ಶೆಡ್‌ನಲ್ಲಿ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದ ವಿಜಯ್ ಕುಮಾರ್ ಇಂದು ಕೋರ್ಟ್ ವಿಚಾರಣೆ ವೇಳೆ ತದ್ವಿರುದ್ಧ ಹೇಳಿಕೆ ನೀಡಿದ್ದಾರೆ.
ಕೃತ್ಯ ನಡೆದ ದಿನ ತಾನು ಶೆಡ್‌ನಲ್ಲಿ ಏನನ್ನೂ ನೋಡಿಲ್ಲ, ನನಗೆ ಈ ಘಟನೆಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಉಲ್ಟಾ ಹೊಡೆದಿದ್ದಾರೆ.
ನನಗೇನೂ ಗೊತ್ತಿಲ್ಲ. ನಾನು ಕಚೇರಿಯಿಂದ ಹೊರಗೆ ಬಂದೇ ಇಲ್ಲ. ಹೊರಗೆ ನಡೆದಿರುವ ಘಟನೆಯ ಅರಿವಿಲ್ಲ, ನಾನ್ಯಾರನ್ನೂ ನೋಡಿಲ್ಲ ಎಂದು ವಿಜಯ್ ಕುಮಾರ್ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಇದರೊಂದಿಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು ನಾಲ್ವರು ಸಾಕ್ಷಿಗಳು ಉಲ್ಟಾ ಹೊಡೆದಂತಾಗಿದೆ.
ಈ ಹಿಂದೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಪುನೀತ್, ಕಿರಣ್ ಹಾಗೂ ಸೆಕ್ಯೂರಿಟಿ ಗಾರ್ಡ್ ನರೇಂದ್ರ ಸಿಂಗ್ ಕೂಡ ಶೆಡ್‌ನಲ್ಲಿ ಏನೂ ನಡೆದಿಲ್ಲ ಎಂದು ಹೇಳುವ ಮೂಲಕ ಪ್ರತಿಕೂಲ ಸಾಕ್ಷಿಗಳಾಗಿದ್ದರು. ಇದೀಗ ಮಲ್ಲಿಕಾರ್ಜುನ್ ಮತ್ತು ವಿಜಯ್ ಕುಮಾರ್ ಕೂಡ ಅದೇ ಹಾದಿ ಹಿಡಿದಿದ್ದು, ಪಟ್ಟಣಗೆರೆ ಶೆಡ್‌ನ ಒಟ್ಟು ನಾಲ್ವರು ಕೆಲಸಗಾರರು ಪ್ರಾಸಿಕ್ಯೂಷನ್‌ಗೆ ಶಾಕ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



