ರಾಜ್ಯ

'ಬಸವ ಮಂಟಪ' ಕೃತಿ ವಿವಾದ: ರವಿ ಹಂಜ್'ಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು

'ಬಸವ ಮಂಟಪ' ಕೃತಿ ವಿವಾದ: ರವಿ ಹಂಜ್'ಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು
ಬಸವಮಂಟಪ ಕೃತಿ -ಲೇಖಕ ರವಿ ಹಂಜ್
Published On :

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಹಾಗೂ ಅವರ ವಚನಗಳನ್ನು ಅವಮಾನಿಸಿದ ಆರೋಪ ಎದುರಿಸುತ್ತಿದ್ದ ವಿವಾದಾತ್ಮಕ 'ಬಸವ ಮಂಟಪ' ಕೃತಿ ಲೇಖಕ, ಅನಿವಾಸಿ ಭಾರತೀಯ, ದಾವಣಗೆರೆ ಮೂಲದ ರವಿ ಹಂಜಗಿಮಠ್(ರವಿ ಹಂಜ್) ಅವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಬಂಧನ ಭೀತಿಯಲ್ಲಿದ್ದ ರವಿ ಹಂಜ್ ಅವರು ನಿರೀಕ್ಷಣಾ ಜಾಮೀನು ಕೋರಿ 56ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಪ್ರಭು ಅವರು, ಲೇಖಕ ರವಿ ಹಂಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದ್ದಾರೆ.

ರವಿ ಹಂಜ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಎರಡು ವರ್ಷಗಳಿಂದ ಪತ್ರಿಕೆಯಲ್ಲಿ ಲೇಖನ ಪ್ರಕಟವಾಗುತ್ತಿತ್ತು. ಆಗ ಲೇಖನಗಳಿಗೆ ಯಾರು ಅಕ್ಷೇಪಣೆ ಸಲ್ಲಿಸಲಿರಲಿಲ್ಲ. ಈಗ ಅದೇ ಲೇಖನ ಪುಸ್ತಕ ಆದಾಗ ದೂರು ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ದೂರು ಎಂದು ವಾದಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ವಾದ ಮಂಡಿಸಿದ್ದ ಸರ್ಕಾರಿ ಅಭಿಯೋಜಕರು, ಅರ್ಜಿದಾರರು ತಮ್ಮ ಕೃತಿಯ ಮೂಲಕ ಜಗಜ್ಯೋತಿ ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆ. ಇದರಿಂದ ಸಮಾಜದ ಭಾವನೆಗಳಿಗೆ ಧಕ್ಕೆಯಾಗಿದ್ದು, ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ವೇಳೆ ಯಾರು ಯಾರ ಬಗ್ಗೆ ಹೇಗಾದ್ರೂ ಪುಸ್ತಕ ಬರೆಯಬಹುದೇ, ಬೇರೆಯವರ ಭಾವನೆಗೆ ಧಕ್ಕೆ ತರಬಹುದೇ ಅಂತ ನ್ಯಾಯಾಧೀಶ ಮೋಹನ್ ಅವರು, ರವಿ ಹಂಜ್ ಅವರಿಗೆ ಪ್ರಶ್ನೆ ಮಾಡಿದ್ದಾರೆ. ನಂತರ ಎರಡು ಕಡೆ ವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.