ಜಪಾನ್ Railway ಸ್ವಚ್ಛತೆ- ಸಮಯಪಾಲನೆಗೆ CM ಫಿದಾ: ರಾಜ್ಯದ ಒಂದು ಕಡೆ ಜಪಾನ್ ಮಾದರಿ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ; DKS

ಜಪಾನ್: ಕರ್ನಾಟಕದಲ್ಲಿಯೂ ಜಪಾನ್ ಮಾದರಿಯ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ನಿರ್ಮಿಸುವ ಪ್ರಯತ್ನ ಮಾಡಬೇಕು ಎಂಬ ಅಭಿಲಾಷೆ ಹೊಂದಿರುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಜಪಾನ್‌ನಲ್ಲಿ ರೈಲ್ವೆ ಪ್ರಯಾಣದ ಅನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿರುವ ಸಿಎಂ ಅವರು, ಅಲ್ಲಿನ ರೈಲ್ವೆ ನಿಲ್ದಾಣಗಳ ಸ್ವಚ್ಛತೆ, ಆಧುನಿಕ ಸೌಲಭ್ಯಗಳು, ರೈಲುಗಳ ವೇಗ ಹಾಗೂ ಸಮಯಪಾಲನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಪಾನ್‌ನಲ್ಲಿರುವ ರೈಲ್ವೆ ನಿಲ್ದಾಣಗಳನ್ನು ನೋಡಿದಾಗ ವಿಶೇಷ ಅನುಭವವಾಗುತ್ತದೆ. ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿಯೂ ಕೆಳಭಾಗ ಮತ್ತು ಮೇಲ್ಭಾಗದಲ್ಲಿ ದೊಡ್ಡ ದೊಡ್ಡ ಶಾಪಿಂಗ್ ಸೆಂಟರ್‌ಗಳು, ಪಂಚತಾರಾ ಹೋಟೆಲ್‌ಗಳಿವೆ.
ವಿಮಾನ ನಿಲ್ದಾಣಗಳನ್ನು ಹೇಗೆ ಸ್ವಚ್ಛವಾಗಿ ನಿರ್ವಹಿಸುತ್ತಾರೋ ಅದೇ ರೀತಿ ರೈಲುಗಳು ಮತ್ತು ರೈಲ್ವೆ ನಿಲ್ದಾಣಗಳನ್ನು ಅತ್ಯಂತ ಸ್ವಚ್ಛವಾಗಿ ಇಟ್ಟುಕೊಂಡಿದ್ದಾರೆ. ಇಂತಹ ಮಾದರಿಯನ್ನು ನಮ್ಮ ಕರ್ನಾಟಕದಲ್ಲಿಯೂ ಕನಿಷ್ಠ ಒಂದು ಕಡೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಬೇಕು ಎಂಬ ಆಸೆ ಇದೆ" ಎಂದು ಹೇಳಿದರು.
ಇಲ್ಲಿನ ರೈಲುಗಳ ವೇಗ, ಸ್ವಚ್ಛತೆ ಮತ್ತು ಪ್ರಯಾಣಿಕರಿಗೆ ಕಲ್ಪಿಸಿರುವ ಸೌಲಭ್ಯಗಳು ಅದ್ಭುತವಾಗಿವೆ. ವಿಮಾನ ಪ್ರಯಾಣದಲ್ಲಿ ಸಿಗುವ ಸೌಲಭ್ಯಗಳಿಗಿಂತಲೂ ಉತ್ತಮವಾದ ಸ್ವಚ್ಛತೆಯನ್ನು ರೈಲ್ವೆ ವ್ಯವಸ್ಥೆಯಲ್ಲಿ ಕಾಯ್ದುಕೊಂಡಿದ್ದಾರೆ.
ಎಲ್ಲಕ್ಕಿಂತ ಮುಖ್ಯವಾಗಿ ಒಂದು ನಿಮಿಷವೂ ವ್ಯತ್ಯಯವಾಗದಂತೆ ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ನಿಗದಿತ ಸಮಯಕ್ಕೆ ರೈಲುಗಳು ಸಂಚರಿಸುತ್ತವೆ. ಇಲ್ಲಿನ ವಿವಿಧ ರೈಲ್ವೆ ನಿಲ್ದಾಣಗಳು ಮತ್ತು ಪ್ಲಾಟ್‌ಫಾರ್ಮ್‌ಗಳನ್ನು ವೀಕ್ಷಿಸುವ ಅವಕಾಶವೂ ಸಿಕ್ಕಿದೆ ಎಂದರು.
ಇಂತಹ ಅನೇಕ ಹೊಸ ಪ್ರಯತ್ನಗಳಿಗೆ ನಾವು ಕೈಹಾಕಬೇಕು. ನಮ್ಮ ದೇಶವೂ ಅಭಿವೃದ್ಧಿಯ ಹಾದಿಯಲ್ಲಿ ಇನ್ನಷ್ಟು ವೇಗವಾಗಿ ಮುನ್ನಡೆಯಲು ಇಂತಹ ಅತ್ಯುತ್ತಮ ಮಾದರಿಗಳನ್ನು ಅಳವಡಿಸಿಕೊಳ್ಳುವ ಕೆಲಸ ಮಾಡಬೇಕಿದೆ. ಜಪಾನ್ ಪ್ರವಾಸ ನನ್ನ ಜೀವನದಲ್ಲಿ ಹೊಸ ಅನುಭವ ನೀಡಿದೆ" ಎಂದು ವಿಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



