ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆ: 10 ವರ್ಷದಲ್ಲಿ ₹800 ಕೋಟಿ ಹೂಡಿಕೆಗೆ ಒಪ್ಪಿಗೆ!

ಟೋಕಿಯೋ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 5ನೇ ಹಂತದಲ್ಲಿರುವ 'ವಿಪ್ರೋ ಕವಾಸಕಿ ಪ್ರಿಸಿಷನ್ ಮೆಷಿನರಿ ಪ್ರೈವೇಟ್ ಲಿಮಿಟೆಡ್' ಘಟಕವನ್ನು ವಿಸ್ತರಿಸಲು ಕವಾಸಕಿ ಹೆವಿ ಇಂಡಸ್ಟ್ರೀಸ್ ಸಂಸ್ಥೆಯು ಮುಂದಿನ 10 ವರ್ಷಗಳಲ್ಲಿ ₹800 ಕೋಟಿವರೆಗೆ ಹೂಡಿಕೆ ಮಾಡಲು ಬದ್ಧತೆ ತೋರಿದ್ದು, ಇದು ಕರ್ನಾಟಕದ ಉತ್ಪಾದನಾ ಮತ್ತು ಎಂಜಿನಿಯರಿಂಗ್ ವಲಯಕ್ಕೆ ದೊಡ್ಡ ಉತ್ತೇಜನ ನೀಡಿದೆ.
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ಟೋಕಿಯೊದಲ್ಲಿ ಈ ಒಡಂಬಡಿಕೆಗೆ (MoU) ಸಹಿ ಹಾಕಲಾಯಿತು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಐಎಎಸ್, ಕವಾಸಕಿ ಹೆವಿ ಇಂಡಸ್ಟ್ರೀಸ್ ನ ಕೆಂಜಿ ಮಟ್ಸುಶಿತಾ ಮತ್ತು ವಿಪ್ರೋ ಕವಾಸಕಿ ಪ್ರಿಸಿಷನ್ ಮೆಷಿನರಿಯ ಸಿಇಒ ಮಿನೋರು ಹಟ್ಸುಡಾ ಅವರು ಒಪ್ಪಂದವನ್ನು ವಿನಿಮಯ ಮಾಡಿಕೊಂಡರು.
ಪ್ರಸ್ತಾವಿತ ಘಟಕವು ನಿರ್ಮಾಣ ಸಲಕರಣೆಗಳ ಉದ್ಯಮಕ್ಕೆ ಅಗತ್ಯವಿರುವ ಹೈಡ್ರಾಲಿಕ್ ಪಂಪ್ ಗಳು, ಸ್ವಿಂಗ್ ಮೋಟಾರ್ಗಳು ಮತ್ತು ಸಂಬಂಧಿತ ಬಿಡಿಭಾಗಗಳನ್ನು ತಯಾರಿಸಲಿದೆ. ಈ ಹೂಡಿಕೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಮೊದಲ ಹಂತದಲ್ಲಿ ₹200–400 ಕೋಟಿ ಮತ್ತು ಎರಡನೇ ಹಂತದಲ್ಲಿ ₹400–800 ಕೋಟಿ ಹೂಡಿಕೆಯಾಗಲಿದ್ದು, ಇದರಿಂದ ಸುಮಾರು 600 ಉನ್ನತ ಮಟ್ಟದ ಉತ್ಪಾದನಾ ಉದ್ಯೋಗಗಳು ಸೃಷ್ಟಿಯಾಗಲಿವೆ.
2012ರಲ್ಲಿ ಬೆಂಗಳೂರಿನಲ್ಲಿ ಸ್ಥಾಪನೆಯಾದ ವಿಪ್ರೋ ಕವಾಸಕಿ ಪ್ರಿಸಿಷನ್ ಮೆಷಿನರಿ, ಭಾರತದ ಎಕ್ಸ್ಕಾವೇಟರ್ ಹೈಡ್ರಾಲಿಕ್ ಪಂಪ್ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. ಈ ವಿಸ್ತರಣೆಯು ಈ ಯಶಸ್ವಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಕರ್ನಾಟಕದ ನಿರ್ಮಾಣ ಸಲಕರಣೆಗಳು ಮತ್ತು ಬಂಡವಾಳ ಸರಕುಗಳ (ಕ್ಯಾಪಿಟಲ್ ಗೂಡ್ಸ್) ವಲಯಕ್ಕೆ ಹೆಚ್ಚಿನ ಶಕ್ತಿ ತುಂಬಲಿದೆ.p
ಕರ್ನಾಟಕ ಜಪಾನ್ ಹೂಡಿಕೆದಾರರ ನೆಚ್ಚಿನ ತಾಣ
2016ರಿಂದೀಚೆಗೆ 101 ಜಪಾನೀಸ್ ಗ್ರೀನ್ಫೀಲ್ಡ್ ಯೋಜನೆಗಳು ಮತ್ತು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 525ಕ್ಕೂ ಹೆಚ್ಚು ಜಪಾನೀಸ್ ಸಂಸ್ಥೆಗಳೊಂದಿಗೆ, ಕರ್ನಾಟಕವು ಜಪಾನ್ ಹೂಡಿಕೆದಾರರ ನೆಚ್ಚಿನ ತಾಣವಾಗಿ ಮುಂದುವರಿದಿದೆ. ಈ ಯೋಜನೆಯು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಭೂಮಿ ಹಂಚಿಕೆ, ಅನುಮೋದನೆಗಳು, ನಿರಾಕ್ಷೇಪಣಾ ಪತ್ರಗಳು (ಕ್ಲಿಯರೆನ್ಸ್) ಮತ್ತು ಅನ್ವಯವಾಗುವಂತ ಪ್ರೋತ್ಸಾಹ ನೀಡಲಾಗುವುದು.
ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಭೂಮಿ, ಅಗತ್ಯ ಅನುಮತಿಗಳು, ಕ್ಲಿಯರೆನ್ಸ್ ಹಾಗೂ ಸೂಕ್ತ ಪ್ರೋತ್ಸಾಹಧನ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಇದರೊಂದಿಗೆ, 2027ರ ಏಪ್ರಿಲ್ 20 ರಿಂದ 22ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ‘ಇನ್ವೆಸ್ಟ್ ಕರ್ನಾಟಕ’ (Invest Karnataka 2027) ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಕವಾಸಕಿ ಸಂಸ್ಥೆಯ ನಾಯಕತ್ವಕ್ಕೆ ಆಹ್ವಾನ ನೀಡಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಹಾರೋಹಳ್ಳಿಯಲ್ಲಿ ವಿಪ್ರೋ ಕವಾಸಕಿ ನಿಖರ ಯಂತ್ರೋಪಕರಣಗಳ ವಿಸ್ತರಣೆಗಾಗಿ ಮುಂದಿನ 10 ವರ್ಷಗಳಲ್ಲಿ ₹800 ಕೋಟಿಯವರೆಗೆ ಹೂಡಿಕೆ ಮಾಡುವ ಕವಾಸಕಿ ಹೆವಿ ಇಂಡಸ್ಟ್ರೀಸ್ ನಿರ್ಧಾರವು ನಮ್ಮ ಕೈಗಾರಿಕಾ ಸಾಮರ್ಥ್ಯಕ್ಕೆ ದೊರೆತ ಮತ್ತೊಂದು ಬಲವಾದ ಅನುಮೋದನೆಯಾಗಿದೆ. ಇದರಿಂದ ನಮ್ಮ ಯುವಕರಿಗೆ ಸುಮಾರು 600 ಉತ್ತಮ ಉದ್ಯೋಗಗಳು ದೊರೆಯಲಿವೆ. ಇನ್ವೆಸ್ಟ್ ಕರ್ನಾಟಕ 2027 ಸಮಾವೇಶಕ್ಕೆ ಕವಾಸಕಿ ನಾಯಕತ್ವವನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇನೆ" ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



