ಪ್ರತ್ಯೇಕ ಘಟನೆ: ಬೆಂಗಳೂರಿನಲ್ಲಿ ₹7.37 ಕೋಟಿ ಮೌಲ್ಯದ ಮಾದಕವಸ್ತು ವಶ, ಮೂವರ ಬಂಧನ

ಬೆಂಗಳೂರು: ಪ್ರತ್ಯೇಕ ಘಟನೆಯಲ್ಲಿ ಬೆಂಗಳೂರಿನಲ್ಲಿ ₹7.37 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಅಧಿಕಾರಿಗಳು ಬಂಧಿಸಿದ್ದು ಆತನ ಬ್ಯಾಗ್‌ನಲ್ಲಿದ್ದ 1.65 ಕೋಟಿ ರೂ. ಮೌಲ್ಯದ 4.7 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದೆಡೆ, ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ಡ್ರಗ್ಸ್ ಪೆಡ್ಲರ್ ಗಳಿಗೆ ಮಾದಕ ವಸ್ತುಗಳನ್ನು ವಿತರಿಸಲು ಕಾಯುತ್ತಿದ್ದ ಇಮಾನ್ ಪಾಷಾ (28) ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಆಯೇಷಾ ಸಿದ್ದಿಕಿಯನ್ನು (27) ಬಂಧಿಸಲಾಗಿದೆ. ಬಂಧಿತರಿಂದ 5.72 ಕೋಟಿ ಮೌಲ್ಯದ 5.72 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
ನವೆಂಬರ್ 22ರಂದು ಮಧ್ಯಾಹ್ನ 12.30 ರ ಸುಮಾರಿಗೆ, ಆರೋಪಿಗಳು ಈ ನಿಷೇಧಿತ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಪೆಡ್ಲರ್ ಗಳಿಗೆ ವಿತರಿಸಲು ಕಾಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಯಲಹಂಕ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



