ರಾಜ್ಯ

ಯೋಗೀಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದು, ಮತ್ತೆ ಜೈಲೇ ಗತಿ..!

ಯೋಗೀಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದು, ಮತ್ತೆ ಜೈಲೇ ಗತಿ..!
ಶಾಸಕ ವಿನಯ್ ಕುಲಕರ್ಣಿ
Published On :

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದ್ದು, 2 ವಾರಗಳಲ್ಲಿ ಸೆಷನ್ಸ್‌ ಕೋರ್ಟ್‌ಗೆ ಶರಣಾಗುವಂತೆ ಸೂಚಿಸಿದೆ.ಡಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲೀಗ ವಿನಯ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ.

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.