10ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ನಟರು, ಸಾಹಿತಿಗಳು, ರೈತರಿಂದ ಬೆಂಬಲ!

ಬೆಂಗಳೂರು: ಗೌರವಧನವನ್ನು 15,000 ರೂಗಳಿಗೆ ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಗುರುವಾರ 10 ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನೆಗೆ ನಟರು, ಬರಹಗಾರರು, ರೈತ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಅನಿರ್ದಿಷ್ಟಾವಧಿ ಪ್ರತಿಭಟನೆಯು 10ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ಅನೇಕ ಕಾರ್ಯಕರ್ತೆಯರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಜುಬೇದಾ ಬೇಗಂ (36) ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ, ದೊಡ್ಡಬಳ್ಳಾಪುರದ ಲಕ್ಷಮ್ಮ (50) ಎಂಬುವರಿಗೆ ಎದೆನೋವಿನ ಸಮಸ್ಯೆ ಕಾಣಿಸಿಕೊಂಡಿತು. ಯಾದಗಿರಿ ಜಿಲ್ಲೆಯ ಚಂದಾಬಿ ಅವರಿಗೂ ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು.
ಈ ಮಧ್ಯೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನಟರು ಬೆಂಬಲ ವ್ಯಕ್ತಪಡಿಸಿದ್ದು, ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯ ಕಾರ್ಯಕರ್ತೆಯರು ತಮಗೂ ಮತ್ತು ತಮ್ಮ ತಾಯಿಗೂ ಹೇಗೆ ಆರೈಕೆ ಮಾಡಿದರು ಎಂಬುದನ್ನು ನಟ ವಿನೋದ್ ರಾಜ್ ನೆನಪಿಸಿಕೊಂಡರು. "ನನ್ನ ತಾಯಿ ಈಗ ನಮ್ಮೊಂದಿಗಿಲ್ಲ, ಆದರೆ ನಿಮ್ಮಲ್ಲಿ ಸಾವಿರಾರು ಮಂದಿ ನನಗೆ ತಾಯಿಯ ಸಮಾನರಾಗಿದ್ದೀರಿ. ನಿಮ್ಮ ಬೇಡಿಕೆಗಳು ಶೀಘ್ರದಲ್ಲೇ ಈಡೇರಲಿ ಎಂದು ನಾನು ಆಶಿಸುತ್ತೇನೆ" ಎಂದು ಅವರು ಹೇಳಿದರು.
ನಟಿ ಮಾಳವಿಕಾ ಅವಿನಾಶ್ ಮಾತನಾಡಿ, ಇತರರ ಆರೋಗ್ಯವನ್ನು ನೋಡಿಕೊಳ್ಳುವ ಮೂಲಕ ಅವರಿಗೆ ಭರವಸೆ ನೀಡುವ ಮಹಿಳೆಯರೇ ಈ ಆರೋಗ್ಯ ಕಾರ್ಯಕರ್ತೆಯರು ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಮಾತನಾಡಿ, ಆರೋಗ್ಯ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರದ ಧೋರಣೆಯನ್ನು ಟೀಕಿಸಿದರು. ಬರಹಗಾರರಾದ ಜಾಣಗೆರೆ ವೆಂಕಟರಾಮಯ್ಯ ಮತ್ತು ಡಾ. ವಸುಂಧರಾ ಭೂಪತಿ ಅವರು ಪ್ರತಿಭಟನಾ ನಿರತ ಕಾರ್ಯಕರ್ತೆಯರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಸಚಿವರ ವೇತನವನ್ನು ಹೆಚ್ಚಿಸಲು ಮತ್ತು 'ಕುಮಾರ ಕೃಪಾ' ಅತಿಥಿ ಗೃಹವನ್ನು ನವೀಕರಿಸಲು ಹಣವಿರುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಲು ಹಣ ಇಲ್ಲವೇ? ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಪ್ರಶ್ನಿಸಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆ ನ್ಯಾಯಸಮ್ಮತವಾಗಿದೆ; ಸರ್ಕಾರ ಏಕೆ ಗಮನಹರಿಸುತ್ತಿಲ್ಲ: HD ಕುಮಾರಸ್ವಾಮಿ; Video
ಮಧ್ಯಾಹ್ನದ ಬಿಸಿಯೂಟ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
ರಾಜ್ಯ ಸರ್ಕಾರವು 'ಕ್ಲಸ್ಟರ್ ಕಿಚನ್' (ಕೇಂದ್ರೀಕೃತ ಅಡುಗೆ ಮನೆ) ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಇರುವ ಮಧ್ಯಾಹ್ನದ ಬಿಸಿಯೂಟ ನೌಕರರು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿದ್ದಾರೆ. 'ಕ್ಲಸ್ಟರ್ ಕಿಚನ್'ಗಳನ್ನು ಸ್ಥಾಪಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದರೂ, ಈ ಪ್ರತಿಭಟನೆ ನಡೆದಿದೆ.
"ನಮಗೆ ಬಂಗಾರಪ್ಪ ಅವರ ಭರವಸೆಗಳ ಮೇಲೆ ನಂಬಿಕೆಯಿಲ್ಲ, ಅದಕ್ಕಾಗಿಯೇ ನಾವು ಅಧಿಕೃತವಾಗಿ ಈ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ" ಎಂದು ನೌಕರರೊಬ್ಬರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


