ರಾಜ್ಯ

ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕೊಲೆ; ಪ್ರಿಯಕರನಿಂದಲೇ ದುಷ್ಕೃತ್ಯ!

ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಕೊಲೆ; ಪ್ರಿಯಕರನಿಂದಲೇ ದುಷ್ಕೃತ್ಯ!
ಗೋಕುಲ್ ಕೃಷ್ಣ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಾಟನ್ ಪೇಟೆಯ ಮಸ್ತಾನ್ ದರ್ಗಾ ಬಳಿ ಇರುವ ಲಾಡ್ಜ್‌ವೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

ಕೊಲೆಯಾದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಗಂಗಾ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ಆರೋಪದ ಮೇಲೆ ಆಕೆಯ ಪ್ರಿಯಕರ ಗೋಕುಲ್ ಕೃಷ್ಣನನ್ನು ಬಂಧಿಸಲಾಗಿದೆ.

ಮೃತ ಗಂಗಾ ಹಾಗೂ ಆರೋಪಿ ಗೋಕುಲ್ ಇಬ್ಬರು ಕೇರಳದ ಆಡೂರು ಮೂಲದವರಾಗಿದ್ದು, ಕಳೆದ ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಕೊಲೆಗೆ ಮುನ್ನ ಆರೋಪಿ ಚಾಕು ಖರೀದಿ ಮಾಡಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಇಬ್ಬರ ಮಧ್ಯೆ ಗಲಾಟೆ ಆರಂಭವಾಗಿದೆ. ಈ ವೇಳೆ ಜಗಳ ತಾರಕಕ್ಕೇರಿದ್ದು, ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.