'ಸಹಾಯ ಮಾಡ್ತೇವೆ, ಹಾಗೆಂದು ನಿಮ್ಮ ಬೇಡಿಕೆಗಳಿಗೆಲ್ಲಾ ಸಹಿ ಹಾಕಲು ಆಗಲ್ಲ, ಪ್ರತಿಭಟನೆ ಹಿಂಪಡೆಯಿರಿ': ಆಶಾ ಕಾರ್ಯಕರ್ತೆಯರಿಗೆ CM ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸಮಸ್ಯೆ, ಬೇಡಿಕೆ ಬಗ್ಗೆ ನಮಗೆ ಅರಿವಿದೆ, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಳ್ಳುತ್ತೇವೆ, ಅವರನ್ನು ಕರೆದು ಮಾಡುತ್ತೇವೆ, ಏನಾದರೊಂದು ಸಹಾಯ ಮಾಡುತ್ತೇವೆ, ಪ್ರತಿಭಟನೆ ಕೈಬಿಟ್ಟು ಸೇವೆಗೆ ಮರಳುವಂತೆ ಸಿಎಂ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿಯವರಿಗೆ ಮಾತನಾಡುವ ಹಕ್ಕಿಲ್ಲ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಕೆಲವನ್ನಾದರು ನಮ್ಮ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ, ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಿ ನೋಡೋಣ, ಹಠ ಹಿಡಿಯದೆ ಪ್ರತಿಭಟನೆ ಹಿಂಪಡೆಯಿರಿ ಎಂದು ಕೇಳಿಕೊಂಡರು.
ಅವರು ಹೇಳಿದ್ದನ್ನೆಲ್ಲಾ ಕೇಳೋಕೆ ಸಾಧ್ಯವಿಲ್ಲ, ಆಶಾ ಕಾರ್ಯಕರ್ತೆಯರಿಗೆ ಒಗ್ಗಟ್ಟನ್ನು ಒಡೆಯಲು ಹೋಗುವುದಿಲ್ಲ, ಇದರಲ್ಲಿ ರಾಜಕೀಯ ಮಾಡಲು ಇಷ್ಟಪಡುವುದಿಲ್ಲ, ಎಲ್ಲಾ ಬೇಡಿಕೆಗಳನ್ನು ಕೇಳಿಕೊಂಡು ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಖಡಾಖಂಡಿತವಾಗಿ ಹೇಳಿದರು.
ಅಂದು ಆರೋಗ್ಯ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರ ಜೊತೆ ಸಭೆ ನಡೆದಿತ್ತು, ಅದರ ಎಲ್ಲಾ ವಿವರಗಳನ್ನು ಹೇಳುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


