ರಾಜ್ಯ

ಮಲಯಾಳಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಕೊಡಗಿನ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಹೇಳಿಕೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

ಮಲಯಾಳಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಕೊಡಗಿನ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಹೇಳಿಕೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು
ಮಾಜಿ ಸಂಸದ ಪ್ರತಾಪ್ ಸಿಂಹ
Published On :

ಮಡಿಕೇರಿ: ಮಲಯಾಳಿಗಳು ಕರ್ನಾಟಕವನ್ನು ಅತಿಕ್ರಮಿಸುತ್ತಿದ್ದು, ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಹಾಗೂ ಕೊಡಗಿನ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಮಾಜಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗು ಹಿಂದೂ ಮಲಯಾಳಿ ಸಂಘದ ಸದಸ್ಯರು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಸಂಘದ ಅಧ್ಯಕ್ಷ ಕೆ.ಪಿ. ಪ್ರಶಾಂತ್ ಖಂಡಿಸಿದ್ದು, ಸಮುದಾಯದ ಬುದ್ಧಿವಂತಿಕೆಯ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾಷೆ ಅಥವಾ ಪ್ರಾದೇಶಿಕ ಹಿನ್ನೆಲೆಯ ಆಧಾರದಲ್ಲಿ ಸಮುದಾಯವೊಂದನ್ನು ಅವಮಾನಿಸುವುದು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ಹೇಳಿಕೆಗಳು ಕೋಮು ದ್ವೇಷ ಮತ್ತು ಅಶಾಂತಿಗೆ ಪ್ರಚೋದನೆ ನೀಡುವ ಅಪಾಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂಘದ ಸ್ಥಾಪಕ ಅಧ್ಯಕ್ಷ ಶರತ್ ಕಾಂತ್ ಮಾತನಾಡಿ, ಪ್ರತಾಪ್ ಸಿಂಹ ಅವರ ಹೇಳಿಕೆಗಳು ಸ್ಥಳೀಯ ಮಲಯಾಳಿಗಳ ಗೌರವಕ್ಕೆ ಧಕ್ಕೆ ತಂದಿವೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸದರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಹಾಗೂ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಸೇರಿದಂತೆ ಸೂಕ್ತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಸಮುದಾಯದ ಮುಖಂಡರು ಪೊಲೀಸರನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.