ರಾಜ್ಯ

ಸಿಎಂ ಡಿಕೆ.ಶಿವಕುಮಾರ್ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಆಟೋ ಚಾಲಕನ ಮೂಲಕ ಪೊಲೀಸರಿಗೆ ಕರೆ ಮಾಡಿಸಿ ಬೆದರಿಸಿದ ಆರೋಪಿ ಬಂಧನ..!

ಸಿಎಂ ಡಿಕೆ.ಶಿವಕುಮಾರ್ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಆಟೋ ಚಾಲಕನ ಮೂಲಕ ಪೊಲೀಸರಿಗೆ ಕರೆ ಮಾಡಿಸಿ ಬೆದರಿಸಿದ ಆರೋಪಿ ಬಂಧನ..!
ಸಂಗ್ರಹ ಚಿತ್ರ
Published On :

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರ್ತಿಸಲಾಗಿದೆ. ಆರೋಪಿ ಕಾರ್ತಿಕ್ ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಚಾಲಕ ಭಗವಂತರಾಯ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮುಂದಿನ ಬ್ಯಾರಿಕೇಡ್ ಬಳಿ ಬರುವಂತೆ ಸೂಚಿಸಿದ್ದ.

ಅದರಂತೆ ಸ್ಥಳಕ್ಕೆ ಬಂದ ಆಟೋ ಚಾಲಕ, ಕಾರ್ತಿಕ್‌ಗೆ ಕರೆ ಮಾಡಿ ತಾನು ತಲುಪಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ಫೋನ್ ನೀಡುವಂತೆ ಕಾರ್ತಿಕ್ ಸೂಚಿಸಿದ್ದಾನೆ.

ಆಟೋ ಚಾಲಕ ಪೊಲೀಸರಿಗೆ ಫೋನ್ ನೀಡಿದ ಬಳಿಕ, ಸದಾಶಿವನಗರದಲ್ಲಿರುವ ಸಿಎಂ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಕಾರ್ತಿಕ್ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮುಖ್ಯಮಂತ್ರಿ ಬೆಂಗಾವಲು ಪಡೆ ತೆರಳುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಹೇಳಿದ್ದಾನೆ ಎನ್ನಲಾಗಿದೆ.

ಘಟನೆ ಬಳಿಕ ಸದಾಶಿವನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಕಾರ್ತಿಕ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾನೆ ಎನ್ನಲಾಗಿದ್ದು, ಈ ಹಿಂದೆಯೂ ಹಲವು ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.