ರಾಜ್ಯ

ಕಾಸ್ಮಿಕ್ ಬಿರ್ಲಾ ಗ್ರೂಪ್‌ ನಿಯೋಗ ಸಿಎಂ-ಡಿಸಿಎಂ ಭೇಟಿ: ತುಮಕೂರು-ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ; Video

ಕಾಸ್ಮಿಕ್ ಬಿರ್ಲಾ ಗ್ರೂಪ್‌ ನಿಯೋಗ ಸಿಎಂ-ಡಿಸಿಎಂ ಭೇಟಿ: ತುಮಕೂರು-ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ; Video
ಕಾಸ್ಮಿಕ್ ಬಿರ್ಲಾ ಗ್ರೂಪ್‌ ನಿಯೋಗ ಸಿಎಂ-ಡಿಸಿಎಂ ಭೇಟಿ
Published On :

ಬೆಂಗಳೂರು: ಕಾಸ್ಮಿಕ್ ಬಿರ್ಲಾ ಗ್ರೂಪ್‌ನ ನಿಯೋಗ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸುಮಾರು 1,300 ಹೆಕ್ಟೇರ್ ಪ್ರದೇಶದಲ್ಲಿ 16,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಯೋಜನೆ ಅನುಷ್ಠಾನಗೊಳಿಸುವ ಉದ್ದೇಶ ಹೊಂದಿದೆ.

ಕಾಸ್ಮಿಕ್ ಬಿರ್ಲಾ ಗ್ರೂಪ್‌ನ ನಿರ್ದೇಶಕ ಲಕ್ಷ್ಮಣ್ ಹಾಗೂ ಗ್ಲೋಬಲ್ ಟೆಕ್ನಾಲಜಿ ವ್ಯವಸ್ಥಾಪಕ ನಿರ್ದೇಶಕ ಕಿಶೋರ್ ಸೇರಿದಂತೆ ನಿಯೋಗವು ಬೆಂಗಳೂರಿನಲ್ಲಿ ನಿನ್ನೆ ಶುಕ್ರವಾರ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ 'ಗಂಗಾ'ದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿತು.

ಅಂತಾರಾಷ್ಟ್ರೀಯ ತಂತ್ರಜ್ಞಾನ ಸಹಭಾಗಿತ್ವವನ್ನು ಆಕರ್ಷಿಸುವುದು, ಅತ್ಯಾಧುನಿಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವುದು ಹಾಗೂ ಕೌಶಲ್ಯಪೂರ್ಣ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ.

ಪ್ರಸ್ತಾವನೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಕ್ಷಣಾ ಉತ್ಪಾದನಾ ಕ್ಲಸ್ಟರ್

ದೇಶೀಯ ರಕ್ಷಣಾ ಉತ್ಪಾದನೆ ಮತ್ತು ರಫ್ತು ಉತ್ತೇಜಿಸುವ ಉದ್ದೇಶದಿಂದ ರೂಪಿಸಲಾದ ವಿಶೇಷ ಕೈಗಾರಿಕಾ ಕೇಂದ್ರಗಳಿಗೆ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಎನ್ನುತ್ತಾರೆ.

ಇಲ್ಲಿ ಉತ್ಪಾದನಾ ಘಟಕಗಳು, ಪರೀಕ್ಷೆ ಮತ್ತು ಪ್ರಮಾಣೀಕರಣ ಪ್ರಯೋಗಾಲಯಗಳು, ಪೂರೈಕೆ ಸರಪಳಿಗೆ ಸಂಬಂಧಿಸಿದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (MSME), ಸಂಶೋಧನಾ ಸಂಸ್ಥೆಗಳು ಹಾಗೂ ಸರ್ಕಾರದ ನೀತಿ ಬೆಂಬಲ ವ್ಯವಸ್ಥೆಗಳು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತವೆ.

ಇದರಿಂದ ದೇಶೀಯವಾಗಿ ರಕ್ಷಣಾ ಉಪಕರಣಗಳ ಉತ್ಪಾದನೆ ಹೆಚ್ಚಿಸುವುದು, ಆಮದು ಅವಲಂಬನೆ ಕಡಿಮೆ ಮಾಡುವುದು, ತಂತ್ರಜ್ಞಾನ ಅಭಿವೃದ್ಧಿಪಡಿಸುವುದು ಹಾಗೂ ರಕ್ಷಣಾ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವುದು ಮುಖ್ಯ ಉದ್ದೇಶವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.