ಎರಡು ದಶಕಗಳ ಹಿಂದಿನ ಉಡುಪಿ ಕೊಲೆ ಪ್ರಕರಣ: ಆರೋಪಿಯನ್ನು ಕರ್ನಾಟಕಕ್ಕೆ ಗಡೀಪಾರು ಮಾಡಿದ UAE

ಬೆಂಗಳೂರು: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯನನ್ನು ಸಿಬಿಐ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ ಹಾಗೂ ಕರ್ನಾಟಕ ಪೊಲೀಸರ ಸಮನ್ವಯದೊಂದಿಗೆ ಯುಎಇಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.
2002ರ ನಡೆದಿದ್ದ ಮನೋಹರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕೊಲೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ರಾಜೇಶ್ ಕೇಶವ ಆಚಾರ್ಯ ತಲೆಮರೆಸಿಕೊಂಡಿದ್ದ , 2026ರ ಮೇ ತಿಂಗಳಲ್ಲಿ ಈತನ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಅಲ್ಲದೆ, ಮೂರು ತಿಂಗಳ ಹಿಂದೆಯೇ ಪಾಸ್‌ಪೋರ್ಟ್ ರದ್ದುಗೊಳಿಸಲಾಗಿತ್ತು.
ರಾಜೇಶ್ ಕೇಶವ ಆಚಾರ್ಯ 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ. ಮನೋಹರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಕೇಶವ ಆಚಾರ್ಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ ನಂತರ, ಅವರು ಆತನನ್ನು ಭಾರತಕ್ಕೆ ಹಸ್ತಾಂತರಿಸಿದರು. ನವೆಂಬರ್ 27ರಂದು ಮುಂಬೈಗೆ ಆಗಮಿಸಿದ ಆಚಾರ್ಯನನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದರು" ಎಂದು ಸಿಬಿಐ ತಿಳಿಸಿದೆ.
ಭಾರತದಲ್ಲಿ ಇಂಟರ್‌ಪೋಲ್‌ನ 'ನ್ಯಾಷನಲ್ ಸೆಂಟ್ರಲ್ ಬ್ಯೂರೋ' ಆಗಿ ಕಾರ್ಯನಿರ್ವಹಿಸುವ ಸಿಬಿಐ, ಅಂತರರಾಷ್ಟ್ರೀಯ ಪೊಲೀಸ್ ಸಹಕಾರವನ್ನು ಸುಗಮಗೊಳಿಸಲು 'ಭಾರತ್‌ಪೋಲ್' ಮೂಲಕ ದೇಶಾದ್ಯಂತ ಇರುವ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



