ರಾಜ್ಯ

Bengaluru Traffic Alert: ಇಂದು ಸಂಜೆ ತುಮಕೂರು ರಸ್ತೆಯಲ್ಲಿ ಹೋಗೋ ಪ್ಲ್ಯಾನ್ ಇದೆಯಾ? ಹಾಗಿದ್ರೆ ಈ ಸುದ್ದಿ ಓದಿ..!

Bengaluru Traffic Alert: ಇಂದು ಸಂಜೆ ತುಮಕೂರು ರಸ್ತೆಯಲ್ಲಿ ಹೋಗೋ ಪ್ಲ್ಯಾನ್ ಇದೆಯಾ? ಹಾಗಿದ್ರೆ ಈ ಸುದ್ದಿ ಓದಿ..!
ದಿಲ್ಜಿತ್ ದೋಸಾಂಜ್
Published On :

ಬೆಂಗಳೂರು: ಬೆಂಗಳೂರಿನ ಮಾದಾವರದ ಬಿಐಇಸಿ ಮೈದಾನದಲ್ಲಿ ಭಾನುವಾರ ಸಂಜೆ ನಡೆಯಲಿರುವ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯ ಹಿನ್ನೆಲೆಯಲ್ಲಿ, ತುಮಕೂರು ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

ಸಂಜೆ 4:00 ಗಂಟೆಯಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ನೆಲಮಂಗಲ ಮತ್ತು ಬೆಂಗಳೂರು ನಡುವಿನ ಎರಡೂ ಬದಿಯ ರಸ್ತೆಗಳಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿರಲಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ನೆಲಮಂಗಲದಿಂದ ಬೆಂಗಳೂರಿನ ಕಡೆಗೆ ಹಾಗೂ ಬೆಂಗಳೂರಿನಿಂದ ನೆಲಮಂಗಲದ ಕಡೆಗೆ ಸಂಚರಿಸುವ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಯಿರುವುದರಿಂದ ಹಲವು ಜಂಕ್ಷನ್‌ಗಳಲ್ಲಿ ವಾಹನಗಳ ಚಲನೆ ನಿಧಾನವಾಗಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ (ಬಿಐಇಸಿ) ಮೈದಾನದಲ್ಲಿ ಈ ಸಂಗೀತ ಕಾರ್ಯಕ್ರಮ ನಡೆಯಲಿದೆ.

ದಿಲ್ಜಿತ್ಅಡಕಮಾರನಹಳ್ಳಿ ಅಂಡರ್‌ಪಾಸ್, ಹುಸ್ಕೂರು ಕ್ರಾಸ್, ಟಿಸಿಐ ಅಂಡರ್‌ಪಾಸ್, ಲಕ್ಷ್ಮೀಪುರ ಕ್ರಾಸ್, ಬಿಐಇಸಿ ಅಂಡರ್‌ಪಾಸ್, ಚಿಕ್ಕಬಿದರಕಲ್ಲು ಅಂಡರ್‌ಪಾಸ್, ಕೆನ್ನಮೆಟಲ್ ವಿಡಿಯಾ ಅಪ್-ರ‍್ಯಾಂಪ್, ಪೀಣ್ಯ ಮೇಲ್ಸೇತುವೆ, 8ನೇ ಮೈಲಿ ಜಂಕ್ಷನ್, ದಾಸರಹಳ್ಳಿ ಜಂಕ್ಷನ್, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಜಂಕ್ಷನ್‌ಗಳಲ್ಲಿ ವಾಹನ ಸಂಚಾರ ನಿಧಾನವಾಗುವ ಸಾಧ್ಯತೆಯಿದೆ.

ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಮುಂಚಿತವಾಗಿಯೇ ಪ್ರಯಾಣದ ಯೋಜನೆ ರೂಪಿಸಿಕೊಳ್ಳಬೇಕು, ಹೆಚ್ಚುವರಿ ಸಮಯ ಮೀಸಲಿಡಬೇಕು ಹಾಗೂ ಸುಗಮ ಸಂಚಾರಕ್ಕೆ ಸಂಚಾರ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.