ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಹನೀಯರಿಗೆ ಅವಮಾನ ಸಲ್ಲದು: ಬಸವಣ್ಣನವರಿಗೆ ಮಾಡಿದ ಅವಮಾನಕ್ಕೆ ಮುಸ್ಲಿಂ ಸಂಘಟನೆ ಖಂಡನೆ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಹಾಗೂ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನವನ್ನು ಜಮಾಅತೆ ಇಸ್ಲಾಮಿ ಹಿಂದ್ (ಜೆಐಎಚ್) ಕರ್ನಾಟಕ ಘಟಕ ತೀವ್ರವಾಗಿ ಖಂಡಿಸಿದೆ. ಭಾರತದ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಗೌರವಿಸಬೇಕು ಎಂದು ಸಂಘಟನೆ ಕರೆ ನೀಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಜೆಐಎಚ್ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಲ್ಗಾಮಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ನೈತಿಕ ಹೊಣೆಗಾರಿಕೆಯೂ ಇರುತ್ತದೆ. ಧಾರ್ಮಿಕ ಅಥವಾ ಸಾಂಸ್ಕೃತಿಕ ಭಾವನೆಗಳಿಗೆ ನೋವುಂಟುಮಾಡಲು ಹಾಗೂ ಗೌರವಾನ್ವಿತ ಐತಿಹಾಸಿಕ ವ್ಯಕ್ತಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಬಾರದು ಎಂದು ಹೇಳಿದ್ದಾರೆ.
ಇಸ್ಲಾಂ ಧರ್ಮವು ಪ್ರತಿಯೊಬ್ಬರ ಘನತೆ ಮತ್ತು ಗೌರವವನ್ನು ಎತ್ತಿಹಿಡಿಯುತ್ತದೆ. ಇತರ ಸಮುದಾಯಗಳ ದೇವತೆಗಳು, ನಂಬಿಕೆಗಳು ಹಾಗೂ ಗೌರವಾನ್ವಿತ ವ್ಯಕ್ತಿಗಳನ್ನು ಅವಮಾನಿಸುವುದನ್ನು ಇಸ್ಲಾಂ ನಿಷೇಧಿಸುತ್ತದೆ ಎಂದು ತಿಳಿಸಿದ್ದಾರೆ.
ಬಸವಣ್ಣನವರು ಜಾತಿ ತಾರತಮ್ಯವನ್ನು ಪ್ರಶ್ನಿಸಿ, ಸಮಾನತೆ ಮತ್ತು ಒಳಗೊಳ್ಳುವಿಕೆಯ ಆಧಾರದ ಮೇಲೆ ಸಮಾಜ ನಿರ್ಮಿಸಲು ಶ್ರಮಿಸಿದ ಮಹಾನ್ ಸಮಾಜ ಸುಧಾರಕರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



