Kingfisher Case: ₹66 ಕೋಟಿ ಬಾಕಿ ಕೇಸ್‌ನಲ್ಲಿ ಕಿಂಗ್‌ಫಿಶರ್ ಮಾಜಿ ಸಿಇಒಗೆ ಬಿಗ್ ಶಾಕ್, ವಿಚಾರಣೆಗೆ ವಿಶೇಷ ಕೋರ್ಟ್ ಅಸ್ತು..!

ಬೆಂಗಳೂರು: ವಿಮಾನ ನಿಲ್ದಾಣಕ್ಕೆ ಪಾವತಿಸಬೇಕಿದ್ದ ಸುಮಾರು ₹66 ಕೋಟಿ (ನಿಖರವಾಗಿ ₹65.90 ಕೋಟಿ) ಬಾಕಿ ಹಣವನ್ನು ಪಾವತಿಸದೆ ವಂಚಿಸಿದ 2013ರ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಿಂಗ್‌ಫಿಶರ್ ಏರ್‌ಲೈನ್ಸ್‌ನ ಮಾಜಿ ಸಿಇಒ ಎ. ರಘುನಾಥನ್ ಅವರು ವಿಚಾರಣೆ ಎದುರಿಸಲೇಬೇಕು ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ (ಡಿಸ್ಚಾರ್ಜ್) ಕೋರಿ ಎ. ರಘುನಾಥನ್ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪ್ರಸಾದ್ ಕೆ.ಬಿ. ಅವರು ವಜಾಗೊಳಿಸಿದ್ದಾರೆ.
ಈ ಮೂಲಕ ರಘುನಾಥನ್ ಅವರ ಬಿಡುಗಡೆ ಅರ್ಜಿಯನ್ನು ತಿರಸ್ಕರಿಸಿ 42ನೇ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯವು 2025ರ ಅಕ್ಟೋಬರ್ 28ರಂದು ನೀಡಿದ್ದ ಆದೇಶವನ್ನು ವಿಶೇಷ ಕೋರ್ಟ್ ಎತ್ತಿಹಿಡಿದಿದೆ.
ಪ್ರಯಾಣಿಕರಿಂದ ಯುಡಿಎಫ್ ಮತ್ತು ಪಿಎಸ್‌ಎಫ್ ಶುಲ್ಕವನ್ನು ಸಂಗ್ರಹಿಸಿದ್ದರೂ, ಅದನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್)ಗೆ ಪಾವತಿಸದ ಹಿನ್ನೆಲೆಯಲ್ಲಿ 2013ರಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನ್ಯಾಯಾಲಯದ ಆದೇಶದ ಪ್ರಕಾರ, ಕಿಂಗ್‌ಫಿಷರ್ ಏರ್‌ಲೈನ್ಸ್ 2010-11 ಮತ್ತು 2011-12ನೇ ಸಾಲಿನಲ್ಲಿ ಸಂಗ್ರಹಿಸಿದ್ದ ಮೊತ್ತದ ಒಂದು ಭಾಗವನ್ನು ಪಾವತಿಸಿರಲಿಲ್ಲ. 2012-13ನೇ ಸಾಲಿನಲ್ಲಿ ಪ್ರಯಾಣಿಕರಿಂದ ಸಂಗ್ರಹಿಸಿದ್ದ ಹಣವನ್ನೂ ನಿಗದಿತ ನಿಯಮಗಳ ಪ್ರಕಾರ ಪಾವತಿಸದೆ, ಇತರ ಆರೋಪಿಗಳೊಂದಿಗೆ ಸೇರಿ ಕ್ರಿಮಿನಲ್ ಸಂಚಿನ ಭಾಗವಾಗಿ ಬಳಸಿಕೊಂಡ ಆರೋಪವಿದೆ. ಚಾರ್ಜ್‌ಶೀಟ್ ಪ್ರಕಾರ ಒಟ್ಟು ₹65.90 ಕೋಟಿ ಬಾಕಿ ಉಳಿದಿದೆ.
ಸಂಸದರು ಮತ್ತು ಶಾಸಕರಾಗಿರುವ ಹಾಗೂ ಮಾಜಿ ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪ್ರಸಾದ್ ಕೆ.ಬಿ. ಅವರು, 2025ರ ಅಕ್ಟೋಬರ್ 28ರಂದು 42ನೇ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದ್ದಾರೆ. ಪ್ರಕರಣದಿಂದ ಬಿಡುಗಡೆ ಕೋರಿ ರಘುನಾಥನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಲಯ ದೃಢಪಡಿಸಿದೆ.
ದೂರು, ಅದರೊಂದಿಗೆ ಸಲ್ಲಿಸಲಾದ ದಾಖಲೆಗಳು ಹಾಗೂ ತನಿಖಾಧಿಕಾರಿ ಸಂಗ್ರಹಿಸಿರುವ ಚಾರ್ಜ್‌ಶೀಟ್‌ನಲ್ಲಿನ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಕ್ತ ತೀರ್ಮಾನಕ್ಕೆ ಬಂದಿದೆ ಎಂದು ವಿಶೇಷ ನ್ಯಾಯಾಲಯ ಹೇಳಿದೆ.
ಕ್ರಿಮಿನಲ್ ಸಂಚು ಸಾಮಾನ್ಯವಾಗಿ ರಹಸ್ಯವಾಗಿ ರೂಪುಗೊಳ್ಳುವುದರಿಂದ, ಅದನ್ನು ಸಾಬೀತಾದ ಸಂಗತಿಗಳಿಂದ ದೊರೆಯುವ ನಿರ್ಣಯಗಳ ಆಧಾರದ ಮೇಲೆ ಸಾಬೀತುಪಡಿಸಬೇಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



