'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ.ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Video

ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.
CM and thers in protest in front of CEO office
ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಸಿಎಂ ಡಿ ಕೆ ಶಿವಕುಮಾರ್ ಮತ್ತು ಸಂಪುಟ ಸಹೋದ್ಯೋಗಿಗಳು ನಂತರ ಧರಣಿ ಕುಳಿತರು
Updated on: 

ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸಲು ಕೆಲವರು ಹಲವು ಅರ್ಜಿಗಳನ್ನು ಸಲ್ಲಿಸುವ ಮೂಲಕ ‘ಸಂಚು’ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲಿಟ್ ಮಾಡುವ ಷಡ್ಯಂತ್ರ ನಡೆದಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.

ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದರು. ಎಸ್ ಐಆರ‍್ ಅಕ್ರಮ ಹಾಗೂ ಮತದಾರರ ಹೆಸರು ಡಿಲಿಟ್ ಮಾಡಲು ನಡೆಸುತ್ತಿರುವ ಷಡ್ಯಂತ್ರದ ವಿರುದ್ಧ ಕ್ರಮ ಆಗಬೇಕು. ತಪ್ಪಿತಸ್ಥರ ವಿರುದ್ಧ ಎಫ್ ಐ ಆರ್ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಈ ಬಗ್ಗೆ ಪರಿಶೀಲಿಸಿಸುವುದಾಗಿ ಚುನಾವಣಾ ಆಯುಕ್ತರು ಹೇಳಿದರು. ಪರಿಶೀಲನೆಗೆ ಎರಡು ದಿನ ಸಮಾಯವಾಕಾಶ ನೀಡಿ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಸಿಎಂ ಹಾಗೂ ಸಚಿವರು, ಎಫ್ಐಆರ್ ದಾಖಲಾಗುವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲುವುದಿಲ್ಲ. ಮೊದಲು ಪ್ರಕರಣ ದಾಖಲಿಸಿ, ಕ್ರಮದ ಭರವಸೆ ನೀಡಿ ಅಲ್ಲಿಯವರೆಗೂ ನಾವ್ಯರೂ ಈ ಜಾಗ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದು ಕುಳಿತರು.

CM and thers in protest in front of CEO office
'SIR ದೊಡ್ಡ ಪಿತೂರಿ; ಅರ್ಹ ಮತದಾರರ ಹೆಸರು ಅಳಿಸಲು ಪೂರ್ವಮುದ್ರಿತ Form-7 ಪೂರೈಕೆ': ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ; Video

ಸಿಇಒ ಕಚೇರಿ ಮುಂದೆ ಧರಣಿ

ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಇದೀಗ ಸಿಎಂ ಡಿ ಕೆ ಶಿವಕುಮಾರ್, ಸಚಿವರು ಸೇರಿದಂತೆ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X