ಮಧು ಬಂಗಾರಪ್ಪ ವಿರುದ್ಧ ಆರೋಪ ಮಾಡಿದ್ದ ಎಚ್.ಎಸ್ ಸುಂದರೇಶ್ ಗೆ ಶಾಕ್: ಸೂಡಾ ಅಧ್ಯಕ್ಷರಾಗಿ ಸಿ. ಜಿ ಮಧುಸೂದನ್ ನೇಮಕ

2002ರಲ್ಲಿ ಎನ್‌ಎಸ್‌ಯುಐ ಸಂಘಟನೆಯ ಮೂಲಕ ಸಕ್ರಿಯರಾಗಿದ್ದ ಮಧುಸೂಧನ್, 2010ರಲ್ಲಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
madhu sudhan
ಮಧು ಸೂದನ್
Updated on: 

​ಶಿವಮೊಗ್ಗ: ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿದ್ದು, ಅವರು ಗುರುವಾರ ಅಧಿಕಾರ ವಹಿಸಿಕೊಂಡರು. 40 ವರ್ಷದ ಸೂಡಾ ಇತಿಹಾಸದಲ್ಲಿ ಅತ್ಯಂತ ಕಿರಿಯ ವಯಸ್ಸಿನ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2002ರಲ್ಲಿ ಎನ್‌ಎಸ್‌ಯುಐ ಸಂಘಟನೆಯ ಮೂಲಕ ಸಕ್ರಿಯರಾಗಿದ್ದ ಮಧುಸೂಧನ್, 2010ರಲ್ಲಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಈಚೆಗೆ ಯುವ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಅವರು ಪಕ್ಷದ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ‘ಭಾರತ್‌ ಜೋಡೊ’ ರಾಜ್ಯ ಸಂಯೋಜಕರಾಗಿಯೂ ಕೆಲಸ ಮಾಡಿದ್ದಾರೆ.

madhu sudhan
ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ: ಕಾಂಗ್ರೆಸ್ ನಾಯಕ, SBUDA ಅಧ್ಯಕ್ಷ ಸುಂದರೇಶ್ ಆರೋಪ

ಸೂಡಾ ಹಾಲಿ ಅಧ್ಯಕ್ಷರಾಗಿದ್ದ ಎಚ್.ಎಸ್.ಸುಂದರೇಶ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿದ್ದರಿಂದ ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಸೇರಿದಂತೆ ಪಕ್ಷದ ಜಿಲ್ಲಾ ಮಟ್ಟದ ನಾಯಕರ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಶೋಕಾಸ್ ನೋಟಿಸ್ ನೀಡಿ ಉತ್ತರ ಕೊಡಲು ಏಳು ದಿನಗಳ ಕಾಲಾವಕಾಶ ಕಲ್ಪಿಸಲಾಗಿತ್ತು. ನೋಟಿಸ್‌ಗೆ ಉತ್ತರ ನೀಡಲು ಗಡುವು ಮುಗಿಯುತ್ತಿದ್ದಂತೆಯೇ ಸುಂದರೇಶ ಅವರ ಸ್ಥಾನಕ್ಕೆ ಮಧುಸೂದನ್ ಅವರನ್ನು ನೇಮಕ ಮಾಡಲಾಗಿದೆ ಎಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com