SIR: ಬಳ್ಳಾರಿಯಲ್ಲಿ 7,500 ಮತದಾರರ ಹೆಸರು ಡಿಲೀಟ್‌ಗೆ ಯತ್ನ ಆರೋಪ: ಬಿಜೆಪಿ ಮುಖಂಡ, ಪಾಲಿಕೆ ಅಧಿಕಾರಿಗಳ ವಿರುದ್ಧ ಎಫ್‌ಐಆರ್!

ಬಳ್ಳಾರಿ ನಗರದಲ್ಲಿ 7,500 ಮತದಾರರ ಹೆಸರು ಡಿಲೀಟ್‌ಗೆ ಯತ್ನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟ್ (BLA-1) ಹಾಗೂ ಪಾಲಿಕೆ ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ತಡರಾತ್ರಿ ಎಫ್ ಐಆರ್ ದಾಖಲಾಗಿದೆ.
Ballari District Congress President
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್
Updated on: 

ಬಳ್ಳಾರಿ: ರಾಜ್ಯದಲ್ಲಿ ಎಸ್ ಐಆರ್ ವಿಚಾರವಾಗಿ ಕಾಂಗ್ರೆಸ್​​ ಹಾಗೂ ಬಿಜೆಪಿ ನಡುವಿನ ಜಗಳ ಮತ್ತಷ್ಟು ಜೋರಾಗಿದೆ. ಮತದಾರರ ಪಟ್ಟಿಯಿಂದ ಕಾಂಗ್ರೆಸ್ ಪರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈ ಬಿಡಲು ಸಂಚು ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬಳ್ಳಾರಿ ನಗರದಲ್ಲಿ 7,500 ಮತದಾರರ ಹೆಸರು ಡಿಲೀಟ್‌ಗೆ ಯತ್ನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟ್ (BLA-1) ಹಾಗೂ ಪಾಲಿಕೆ ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ತಡರಾತ್ರಿ ಎಫ್ ಐಆರ್ ದಾಖಲಾಗಿದೆ.

ಕಾಂಗ್ರೆಸ್ BLA ಗೌತಮ್ ನೀಡಿದ ದೂರಿನ ಮೇರೆಗೆ ಬಿಜೆಪಿಯ(BJP) BLA-1 ಶ್ರೀನಿವಾಸ ಮೋತ್ಕರ್, ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ (AC) ನಂದೀಶ್, ಬಿಎಲ್‌ಒಗಳಾದ (BLO) ಸುಮಲತಾ ಮತ್ತು ಶರಣಬಸವ ಸೇರಿದಂತೆ ಇತರರ ವಿರುದ್ಧ ಬಿಎನ್‌ಎಸ್ (BNS 2023) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ (U/S 363(2), 61(2), 217, 3(5)) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಪರಿಶೀಲನೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಬಿಜೆಪಿಯ BLA-1 ಶ್ರೀನಿವಾಸ ಮೋತ್ಕರ್ ಚುನಾವಣಾಧಿಕಾರಿಗಳಿಗೆ ಪತ್ರ ನೀಡಿದ್ದಾರೆ.

ಈ ಪಟ್ಟಿಯಲ್ಲಿ ಶೇ. 98ರಷ್ಟು ಮುಸ್ಲಿಂ ಸಮುದಾಯದವರ ಹಾಗೂ ಕಾಂಗ್ರೆಸ್ ಪರ ಇರುವ ಮತದಾರರ ಹೆಸರುಗಳಿವೆ. ಅಷ್ಟೇ ಅಲ್ಲದೆ ನನ್ನ ಸ್ವಂತ ಸಹೋದರನ ಹೆಸರನ್ನೂ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಕೋಮು ಉದ್ದೇಶ ಹಾಗೂ ಕಾಂಗ್ರೆಸ್ ಮತಗಳನ್ನು ಕಡಿಮೆ ಮಾಡುವ ಷಡ್ಯಂತ್ರ ಇದರ ಹಿಂದಿದೆ ಎಂದು ದೂರಿದರು.

ಬಿಜೆಪಿ ನೀಡಿದ ಪಟ್ಟಿಯಲ್ಲಿದ್ದ ಸ್ಥಳೀಯ ಮತದಾರರು ಮಾತನಾಡಿ, ನಾವು 35 ವರ್ಷಗಳಿಂದ ಇಲ್ಲೇ ವಾಸವಿದ್ದು, ಹಳೆಯ ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲಾ ಸೂಕ್ತ ದಾಖಲೆಗಳನ್ನು ಹೊಂದಿದ್ದೇವೆ. ಹೀಗಿದ್ದರೂ ಅಧಿಕಾರಿಗಳು ಮನೆಗೆ ಬಂದು ದಾಖಲೆ ಕೇಳುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ನಮ್ಮ ಕುಟುಂಬಗಳ ಹೆಸರು ಡಿಲೀಟ್ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Ballari District Congress President
198 ಮುಸ್ಲಿಂ ಮತದಾರರ ಹೆಸರುಗಳನ್ನು ಅಳಿಸಲು ಸಂಚು ರೂಪಿಸಿದ ಆರೋಪ; ಬಿಜೆಪಿ ನಾಯಕರ ವಿರುದ್ಧ FIR ದಾಖಲು

ಕಾಂಗ್ರೆಸ್ ಮುಖಂಡರು ಬ್ರೂಸ್‌ಪೇಟೆ ಠಾಣೆಗೆ ದೂರು ನೀಡಿದರೂ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಧೋರಣೆ ತೋರಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಠಾಣೆಗೆ ದೌಡಾಯಿಸಿ, ಪೊಲೀಸರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ಆಗಮಿಸುತ್ತಿದ್ದಂತೆ ಹೆಚ್ಚುವರಿ ಎಸ್ಪಿ ಮತ್ತು ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀವ್ರ ಪ್ರತಿಭಟನೆಯ ನಂತರ ಪೊಲೀಸರು ತಡರಾತ್ರಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com