ನಕಲಿ ಗಾಂಧಿಗಳ ಓಲೈಸಲು ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಧರಣಿ ನಡೆಸುತ್ತಿರುವುದು ನಿಜಕ್ಕೂ ದುರಂತ..!

ಚುನಾವಣಾ ಪ್ರಕ್ರಿಯೆ, ಎಸ್ ಐ ಆರ್ ಪ್ರಕ್ರಿಯೆ, ಫಾರ್ಮ್ 7, ಮತದಾರರ ಪಟ್ಟಿ ಪರಿಷ್ಕರಣೆಯ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ಹಾಗೂ ಬಿ ಎಲ್ ಎ, ಬಿ ಎಲ್ ಓಗಳಿಗೂ ಸ್ಪಷ್ಟ ಅರಿವಿರುತ್ತದೆ ಮತ್ತು ಚುನಾವಣಾ ಆಯೋಗವೂ ಈ ಬಗ್ಗೆ ನಿರಂತರವಾಗಿ ಗಮನಹರಿಸುತ್ತದೆ.
CM DK Shivkumar
ಸಿಎಂ ಡಿಕೆ.ಶಿವಕುಮಾರ್
Updated on: 

ನವದೆಹಲಿ: ನಕಲಿ ಗಾಂಧಿಗಳನ್ನು ಓಲೈಸಲು ಮತ್ತು ಸಂದೇಹಾಸ್ಪದ ಮತದಾರರನ್ನು ರಕ್ಷಿಸಲು ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಧರಣಿ ನಡೆಸುತ್ತಿರುವುದು ನಿಜಕ್ಕೂ ದುರಂತ ಹಾಗೂ ಖಂಡನೀಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ರಾಜ್ಯದಲ್ಲಿ ಬರಗಾಲ, ರೈತರ ಸಂಕಷ್ಟ ಹಾಗೂ ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ ಗಮನಹರಿಸಬೇಕಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಎದುರು ಏಕಾಏಕಿ ಧರಣಿ ನಡೆಸಿರುವುದು ಅತ್ಯಂತ ವಿಷಾದನೀಯ ಎಂದು ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆ, ಎಸ್ ಐ ಆರ್ ಪ್ರಕ್ರಿಯೆ, ಫಾರ್ಮ್ 7, ಮತದಾರರ ಪಟ್ಟಿ ಪರಿಷ್ಕರಣೆಯ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ಹಾಗೂ ಬಿ ಎಲ್ ಎ, ಬಿ ಎಲ್ ಓಗಳಿಗೂ ಸ್ಪಷ್ಟ ಅರಿವಿರುತ್ತದೆ ಮತ್ತು ಚುನಾವಣಾ ಆಯೋಗವೂ ಈ ಬಗ್ಗೆ ನಿರಂತರವಾಗಿ ಗಮನಹರಿಸುತ್ತದೆ.​ ಹೀಗಿದ್ದರೂ, ರೈತರ ಸಂಕಷ್ಟ, ಬರಗಾಲದ ಪರಿಸ್ಥಿತಿ ಹಾಗೂ ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡುವುದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ನಕಲಿ ಗಾಂಧಿಗಳನ್ನು ಓಲೈಸಲು ಮತ್ತು ಸಂದೇಹಾಸ್ಪದ ಮತದಾರರನ್ನು ರಕ್ಷಿಸಲು ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಧರಣಿ ನಡೆಸುತ್ತಿರುವುದು ನಿಜಕ್ಕೂ ದುರಂತ ಹಾಗೂ ಖಂಡನೀಯ. ಇದು ಇಲ್ಲದ ಗುಮ್ಮನನ್ನು ಸೃಷ್ಟಿಸಿ ಜನರನ್ನು ದಿಕ್ಕು ತಪ್ಪಿಸುವ ನಾಟಕವಷ್ಟೇ ಎಂದು ಕಿಡಿಕಾರಿದ್ದಾರೆ.

​ಬೆಂಗಳೂರಿನಲ್ಲಿ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಡೆ ಅವಕಾಶವಿಲ್ಲ. ಬೇರೆಯವರು ಎಲ್ಲಾದರೂ ಧರಣಿ ಮಾಡಿದ ತಕ್ಷಣ ಕ್ರಮ ಕೈಗೊಳ್ಳುವ ಪೊಲೀಸರು, ಕಾನೂನು ಉಲ್ಲಂಘಿಸಿ ಧರಣಿ ಕುಳಿತ ಇವರ ಮೇಲೆ ಎಫ್‌ಐಆರ್ (FIR) ದಾಖಲಿಸದೆ ಸುಮ್ಮನಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.

CM DK Shivkumar
ಗಣಿ ಹರಾಜು ಪಡೆದೂ ಗಣಿಗಾರಿಕೆ ಆರಂಭಿಸದವರ ಪಟ್ಟಿ ನೀಡಿ; ಅಧಿಕಾರಿಗಳಿಗೆ ಸಿಎಂ ಡಿಕೆ.ಶಿವಕುಮಾರ್ ಸೂಚನೆ

ಇದೇ ವೇಳೆ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಕೂಡ ಶಿವಕುಮಾರ್ ಅವರ ಧರಣಿಯನ್ನು ಟೀಕಿಸಿದ್ದಾರೆ. ಮುಖ್ಯಮಂತ್ರಿ ಜನರ ಕಲ್ಯಾಣ ಮತ್ತು ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯೇ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಆಡಳಿತವನ್ನು ಹೇಗೆ ನಡೆಸುತ್ತಾರೆ?” ಎಂದು ಸೋಮಣ್ಣ ಪ್ರಶ್ನಿಸಿದ್ದಾರೆ. ಪ್ರಚಾರಕೇಂದ್ರಿತ ರಾಜಕಾರಣದ ಬದಲು ಆಡಳಿತದತ್ತ ಗಮನ ಹರಿಸುವಂತೆ ಅವರು ಒತ್ತಾಯಿಸಿದ್ದಾರೆ.

ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವುದು, ರೈತರಿಗೆ ವಿದ್ಯುತ್ ಒದಗಿಸುವುದು ಹಾಗೂ ಬರದ ಪರಿಣಾಮಗಳನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com