

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಯಂತ್ರಕ್ಕೆ ಮಹಿಳೆಯೊಬ್ಬರು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಾಡತಿಪ್ಪೂರು ಮೂಲದ 45 ವರ್ಷದ ಅರಸಮ್ಮ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸಂಗ್ರಹಿಸಲಾಗುವ ಕಸವನ್ನು ಎಂಎಸ್‌ಜಿಪಿ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತದೆ. ಇಂದು ಬೆಳಗ್ಗೆ ಕಸ ವಿಂಗಡಣೆ ಕಾರ್ಯ ನಡೆಯುತ್ತಿದ್ದ ವೇಳೆ ಅರಸಮ್ಮ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಕಳೆದ ಮೂರ್ನಾಲ್ಕು ವರ್ಷದಿಂದ ಅರಸಮ್ಮ ಇಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಕಸವನ್ನ ತಂದು ಈ ಘಟಕದಲ್ಲಿ ವಿಂಗಡಣೆ ಮಾಡಲಾಗುತ್ತಿತ್ತು. ಇಂದು ಬೆಳಗ್ಗೆ ಕಸ ವಿಂಗಡಣೆ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.