ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಸಾವು!

ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಎಂದು ಗುರುತಿಸಲಾಗಿದೆ.
Women killed in accident on Bengaluru-Mysuru expressway
ಭೂಮಿಕಾ
Updated on: 

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಯುವತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಎಂದು ಗುರುತಿಸಲಾಗಿದೆ.

ಭೂಮಿಕಾ ನಿನ್ನೆ ತಮ್ಮ ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಆಗಮಿಸಿದ್ದರು. ತಡರಾತ್ರಿ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇ ರಸ್ತೆ ದಾಟಲು ಯತ್ನಿಸುತ್ತಿದ್ದಾಗ, ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.

Women killed in accident on Bengaluru-Mysuru expressway
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!

ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com