

ಬೆಂಗಳೂರು: ರಾಜ್ಯ ಸರ್ಕಾರವು 5 ಹಿರಿಯ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮತ್ತು ಹೆಚ್ಚುವರಿ ಹೊಣೆಗಾರಿಕೆ ನೀಡಿ ನಿನ್ನೆ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅಧಿಸೂಚನೆ ಹೊರಡಿಸಿದ್ದಾರೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರಿಗೆ ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರ ಹೊಣೆ ನೀಡಲಾಗಿದೆ.
ಪಂಕಜ್ ಕುಮಾರ್ ಪಾಂಡೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಇ-ಆಡಳಿತ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.
ಅಲ್ಪಸಂಖ್ಯಾತ ಇಲಾಖೆಯ ಕಾರ್ಯದರ್ಶಿಯಾಗಿ ಸಲ್ಮಾ ಕೆ ಫಹೀಮ್ ಅವರನ್ನು ನೇಮಕ ಮಾಡಲಾಗಿದೆ.