

ಮೈಸೂರು: ಗುತ್ತಿಗೆದಾನರಿಂದ 20 ಸಾವಿರ ಲಂಚ ಪಡೆಯುತ್ತಿದ್ದ ಇಬ್ಬರು ಎಂಜಿನಿಯರ್ ಗಳನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಂಜನಗೂಡಿನಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಕೆ ಕಾಮಗಾರಿಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಲಾಗಿತ್ತು.
ತಮ್ಮ ಕಚೇರಿಯಲ್ಲೇ ಕುಸುಮ್ ಸೌರ ವಿದ್ಯುತ್ ಯೋಜನೆಯಡಿ ರೈತರ ಜಮೀನಿಗೆ ಸೋಲಾರ್ ಪಂಪ್ ಸೆಟ್ ಅಳವಡಿಕೆ ಕಾಮಗಾರಿಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಗುತ್ತಿಗೆದಾರ ನಟರಾಜು ಅವರಿಂದ ನಂಜನಗೂಡು ನಗರ ವಿಭಾಗದ ಎಇಇ ದೇವರಾಜಯ್ಯ 15 ಸಾವಿರ ರೂ. ಹಾಗೂ ಕಿರಣ್ ಕುಮಾರ್ 5 ಸಾವಿರ ರೂ ಹಣ ಪಡೆದುಕೊಂಡಿದ್ದು ಈ ವೇಳೆ ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಸದ್ಯ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಎಂಜಿನಿಯರ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆಯನ್ನೂ ನಡೆಸಲಾಗಿದ್ದು, ಲಂಚದ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.