

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಸಮೀಪ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವರಂಗ ಕಲಾವಿದ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತನನ್ನು 31 ವರ್ಷದ ಹರ್ಷ ಎಂದು ಗುರುತಿಸಲಾಗಿದೆ.
ಸಂಬಂಧಿಯೊಬ್ಬರನ್ನು ಭದ್ರಾವತಿಗೆ ಬಿಟ್ಟು ಬರಲು ಹರ್ಷ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡು ಹರ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.