ಬಳ್ಳಾರಿಯಲ್ಲಿ ತೀವ್ರಗೊಂಡ SIR ಸಂಘರ್ಷ: ಬೂತ್ ಮಟ್ಟದ ಬಿಜೆಪಿ ಏಜೆಂಟ್ ವಿರುದ್ಧ Search warrant!

ನಾವು ಸೆರ್ಚ್ ವಾರಂಟ್‌ಗಳಿಗೆ ಹೆದರುವುದಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ನಮ್ಮ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುತ್ತಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on: 

ಬಳ್ಳಾರಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಎಫ್‌ಐಆರ್ (FIR) ದಾಖಲಾದ ನಂತರ, ಬಿಜೆಪಿ ಬೂತ್ ಮಟ್ಟದ ಏಜೆಂಟ್ (BLA-1) ಮೋಟ್ಕರ್ ಶ್ರೀನಿವಾಸ್ ವಿರುದ್ಧ ಪೊಲೀಸರು ಶೋಧನೆ ನಡೆಸಲು ನ್ಯಾಯಾಲಯದಿಂದ ವಾರಂಟ್ ಪಡೆದಿದ್ದಾರೆ.

ಪೊಲೀಸರು ರಾಜಕೀಯ ಒತ್ತಡದ ಮೇರೆಗೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಈ ಬೆಳವಣಿಗೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜಿಲ್ಲೆಯ 7,561 ಮತದಾರರ ಅರ್ಹತೆಯನ್ನು ಮರುಪರಿಶೀಲಿಸುವಂತೆ ಕೋರಿ ಶ್ರೀನಿವಾಸ್ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ, ಕಾಂಗ್ರೆಸ್‌ನ BLA-1 ಗೌತಮ್ ಅವರು ಶ್ರೀನಿವಾಸ್ ವಿರುದ್ಧ ದೂರು ದಾಖಲಿಸಿದರು, ಇದು ಎಫ್‌ಐಆರ್ ದಾಖಲಾಗಲು ಕಾರಣವಾಯಿತು.

ನಾವು ಸೆರ್ಚ್ ವಾರಂಟ್‌ಗಳಿಗೆ ಹೆದರುವುದಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ನಮ್ಮ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ, ಸಂಬಂಧಪಟ್ಟ ಪೊಲೀಸ್ ಠಾಣೆ ಹಾಗೂ ಇದಕ್ಕೆ ಕಾರಣರಾದ ಅಧಿಕಾರಿಯ ನಿವಾಸಕ್ಕೂ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

Representational image
ಜೀವಂತ ಮತದಾರ 'ಸತ್ತ'ವರ ಪಟ್ಟಿಗೆ! BLO ಎಡವಟ್ಟಿನಿಂದ ಮಂಗಳೂರಿನಲ್ಲಿ ಗೊಂದಲ; ಜಿಲ್ಲಾಡಳಿತ ಹೇಳಿದ್ದೇನು?

ಈ ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಸೋಮವಾರ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.

ರಾಯಲ್ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ಮತ್ತು ನಂತರ ಬ್ರೂಸ್‌ಪೇಟೆ ಹಾಗೂ ಎಪಿಎಂಸಿ (APMC) ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಲು ಪಕ್ಷವು ಯೋಜನೆ ರೂಪಿಸಿದೆ; ತಮ್ಮ ನಾಯಕರ ವಿರುದ್ಧದ ಕ್ರಮಕ್ಕೆ ಈ ಪೊಲೀಸ್ ಠಾಣೆಗಳೇ ಮೂಲ ಕಾರಣವೆಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com