ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!

ಕರಾವಳಿ ಕರ್ನಾಟಕದಲ್ಲಿ ಮಂಗಳವಾರ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರದಿಂದ ಶನಿವಾರದವರೆಗೆ ಕೆಲವೆಡೆ ಮಳೆಯಾಗಬಹುದು.
Rain pour in many parts of Bengaluru
ಬೆಂಗಳೂರು ಮಳೆ
Updated on: 

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮಂಗಳವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಸೇರಿದಂತೆ ಕೆಲವೆಡೆ ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕದಲ್ಲಿ ಮಂಗಳವಾರ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರದಿಂದ ಶನಿವಾರದವರೆಗೆ ಕೆಲವೆಡೆ ಮಳೆಯಾಗಬಹುದು.

ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡು ಕರ್ನಾಟಕದಲ್ಲಿ ಬಹುತೇಕ ಒಣಹವೆ ಇರಲಿದ್ದು, ಸೋಮವಾರ ಮತ್ತು ಮಂಗಳವಾರ ಹಾವೇರಿ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆ ಇದೆ

Rain pour in many parts of Bengaluru
Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com