

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ದರ್ಶನ್ ಪರ ವಕೀಲರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣದ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಗೆ ಪೊಲೀಸರು ಹೇಳಿಕೆಯನ್ನು ಹೇಳಿಕೊಡುತ್ತಿದ್ದಾರೆ ಎಂದು ದರ್ಶನ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿ ಸಿಆರ್‌ಪಿಸಿ ಹಾಗೂ ಎವಿಡೆನ್ಸ್ ಆ್ಯಕ್ಟ್ ಅಡಿ ದರ್ಶನ್ ಪರ ವಕೀಲರು ಈ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಈ ಎರಡೂ ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ.
ಪ್ರದೋಷ್ ಸಾಕ್ಷ್ಯ ವಿಚಾರಣೆ ಮುಂದುವರಿದಿದೆ. ನಾಳೆಯೂ ಅವರ ಸಾಕ್ಷ್ಯ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ. ಮಹಜರ್‌ನಲ್ಲಿ ಸಂಗ್ರಹಿಸಲಾಗಿರುವ ಸಾಕ್ಷ್ಯಗಳಿಗೆ ಸಂಬಂಧಿಸಿದಂತೆ ಪ್ರದೋಷ್ ಅವರ ಹೇಳಿಕೆಯನ್ನು ಕೋರ್ಟ್ ನಲ್ಲಿ ದಾಖಲಿಸಲಾಗುತ್ತಿದೆ.