ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಎಂದಿನಂತೆ ಇಂದು ಸಹ ತರಬೇತಿಯಲ್ಲಿ ನಿರತವಾಗಿದ್ದ ಸಣ್ಣ ವಿಮಾನವೊಂದು ತಾಂತ್ರಿಕ ದೋಷದಿಂದ ತೊಗರಿ ಹೊಲದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.
Training aircraft makes emergency landing in farmer’s field in Kalaburagi
ತರಬೇತಿ ವಿಮಾನ ತುರ್ತು ಭೂಸ್ಪರ್ಶ
Updated on: 

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದ ಸಮೀಪ ಮಂಗಳವಾರ ಆಘಾತಕಾರಿ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ಅದರಲ್ಲಿದ್ದ ಇಬ್ಬರು ಪೈಲಟ್ ಗಳು ಸುರಕ್ಷಿತವಾಗಿ ಪಾರಾಗಿದ್ದಾರೆ.

ಎಂದಿನಂತೆ ಇಂದು ಸಹ ತರಬೇತಿಯಲ್ಲಿ ನಿರತವಾಗಿದ್ದ ಸಣ್ಣ ವಿಮಾನವೊಂದು ತಾಂತ್ರಿಕ ದೋಷದಿಂದ ತೊಗರಿ ಹೊಲದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮಯಪ್ರಜ್ಞೆ ಮೆರೆದ ಸಿಬ್ಬಂದಿ, ವಿಮಾನವನ್ನು ಜಮೀನಿನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ಇದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

Training aircraft makes emergency landing in farmer’s field in Kalaburagi
ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; ನದಿಯ ದಂಡೆಯ ಮೇಲೆ ಶೂ-ಚಪ್ಪಲಿ, ಮೃತದೇಹದ ಭಾಗಗಳು ಪತ್ತೆ!

ಈ ಘಟನೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com