ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ಸೂಕ್ತ ಸೂಚನೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆಯೇ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
Cockroach Janta Party Protest in bengaluru.
ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್, ಅಭಿಜೀತ್ ದೀಪ್ಕೆ, ಯೂಟ್ಯೂಬರ್ ಧ್ರುವ್ ರಾಠೀ ಭಾಗಿಯಾಗಿರುವುದು.
Updated on: 

ಬೆಂಗಳೂರು: ವಿವಾದಿತ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ'(SIR) ರದ್ದುಗೊಳಿಸುವಂತೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಭಾರಿ ಪ್ರತಿಭಟನೆ ನಡೆಯಿತು.

ನಾಗರಿಕ ಸಮಾಜದ ಗುಂಪುಗಳು, ನಾಗರಿಕ ವೇದಿಕೆಗಳು, 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು ಮಿತ್ರ ಸಂಘಟನೆಗಳು ಈ ಪ್ರತಿಭಟನೆಯನ್ನು ಆಯೋಜಿಸಿದ್ದವು. ಸೂಕ್ತ ಸೂಚನೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆಯೇ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಿಜೆಪಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ, ವಕ್ತಾರ ಸೌರವ್ ದಾಸ್, ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್, ಯೂಟ್ಯೂಬರ್ ಮತ್ತು ರಾಜಕೀಯ ವಿಶ್ಲೇಷಕ ಧ್ರುವ್ ರಾಠೀ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Cockroach Janta Party Protest in bengaluru.
'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಈ ಸ್ಥಳದಲ್ಲಿ 'ಜನತಾ ನ್ಯಾಯಾಲಯ'ವನ್ನು (People’s Tribunal) ಆಯೋಜಿಸಲಾಗಿತ್ತು. ಇದರಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳ ಮತದಾರರು, ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಎಸ್‌ಐಆರ್ ಪ್ರಕ್ರಿಯೆಯಿಂದ ಬಾಧಿತರಾದವರು ಎಂದು ಹೇಳಿಕೊಂಡ ಜನರ ವಿಡಿಯೋ ಹೇಳಿಕೆಗಳನ್ನು ಸಹ ಇಲ್ಲಿ ಪ್ರದರ್ಶಿಸಲಾಯಿತು.

ಈ ವೇಳೆ ಮಾತನಾಡಿದ ಅಭಿಜೀತ್ ದೀಪ್ಕೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗವು "ಪ್ರಜಾಪ್ರಭುತ್ವದ ಹತ್ಯೆ ಮಾಡಿದೆ" ಮತ್ತು "ಮತ ಕಳ್ಳತನ" ನಡೆಸುತ್ತಿದ್ದಾರೆ ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೂ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು. ಎಸ್‌ಐಆರ್ ಅಡಿಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕುವ ಕ್ರಮವು ಬಿಜೆಪಿಯನ್ನು ವಿರೋಧಿಸುವವರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುವ ಉದ್ದೇಶ ಹೊಂದಿದೆ ಎಂದು ಪ್ರತಿಪಾದಿಸಿದರು.

"ನಾವು ಬೀದಿಗಿಳಿದು ಹೋರಾಡುತ್ತೇವೆ, ಪ್ರಜಾಪ್ರಭುತ್ವವನ್ನು ಮರಳಿ ಪಡೆಯುತ್ತೇವೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಟ ಪ್ರಕಾಶ್ ರಾಜ್ ಅವರು, ಮೊದಲು ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಈ ಜ್ಞಾನೇಶ್ ಹೋದರೆ ಮತ್ತೊಬ್ಬ ಅಜ್ಞಾನೇಶ್ ಬರುತ್ತಾನೆ. ಇದು ಕೇವಲ ಮತಗಳ ಅಳಿಸುವಿಕೆಗೆ ಸಂಬಂಧಿಸಿದ್ದಲ್ಲ, ಬದಲಾಗಿ ನಾಗರಿಕರ ಹಕ್ಕುಗಳು ಮತ್ತು ಘನತೆಯ ಮೇಲಿನ ದಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಿಇಸಿ ಜ್ಞಾನೇಶ್ ಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಈ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

"ಈ ಪ್ರತಿಭಟನೆಯ ಉದ್ದೇಶ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವುದು ಮಾತ್ರಲ್ಲ. ಅವರು ಹೋದರೆ ಇನ್ನೊಬ್ಬ ಅಜ್ಞಾನೇಶ್ ಬರುತ್ತಾರೆ. ಎಸ್‌ಐಆರ್ ಅನ್ನು ರದ್ದುಗೊಳಿಸುವುದು ನಮ್ಮ ಗುರಿ" ಎಂದು ಪ್ರಕಾಶ್ ರಾಜ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com