ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
In a major setback for Karnataka, CWRC recommends to release of 3000 cusecs cauvery water daily to Tamil Nadu
ಕೆಆರ್ ಎಸ್
Updated on: 

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಗುರುವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕಾಗಿದೆ. ಈಗಾಗಲೇ ನೀರಿನ ಬರದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಿದೆ.

ಈ ಹಿಂದೆ ತಮಿಳುನಾಡಿಗೆ ಪ್ರತಿದಿನ 4 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ CWMA ಆದೇಶ ನೀಡಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ ನೀರಿನ ಪ್ರಮಾಣವನ್ನು 2 ಸಾವಿರ ಕ್ಯೂಸೆಕ್​​ಗೆ ಇಳಿಸುವಂತೆ ಇತ್ತೀಚೆಗಷ್ಟೇ ಮನವಿ ಮಾಡಿತ್ತು.

In a major setback for Karnataka, CWRC recommends to release of 3000 cusecs cauvery water daily to Tamil Nadu
'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಕಾವೇರಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಪ್ರಮುಖ 4 ಜಲಾಶಯಗಳಲ್ಲಿ ಲಭ್ಯವಿರುವ ನೀರು ಕೇವಲ 49 ಟಿಎಂಸಿ ಮಾತ್ರ. ಈ ನೀರನ್ನು ಮುಂದಿನ ಜೂನ್​​ವರೆಗೆ ಕುಡಿಯಲು ಕಾಯ್ದಿರಿಸುವುದು ಅನಿವಾರ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಿತ್ತು.

ಕಾವೇರಿ ಕಣಿವೆಯ 47 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಮತ್ತೆ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಉತ್ತಮವಾಗಿರುವ ಭರವಸೆ ಇರುವ ಕಾರಣ ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ಇಳಿಸಿ ಎಂದು ಕರ್ನಾಟಕ ಮನವಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com