ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Moving sleeper bus gutted in blaze near Mumbalu village
ಖಾಸಗಿ ಬಸ್ ಗೆ ಬೆಂಕಿ
Updated on: 

ಶಿವಮೊಗ್ಗ: ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಬಸ್‌ನ ಸುಮಾರು ಶೇ.80ರಷ್ಟು ಭಾಗ ಸುಟ್ಟುಹೋದ ಘಟನೆ ಗುರುವಾರ ಮುಂಜಾನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದ ಬಳಿ ನಡೆದಿದೆ.

ಆನಂದಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಬಾಳು ಗ್ರಾಮದ ಬಳಿ ಬೆಳಗ್ಗೆ ಸುಮಾರು 5.45ಕ್ಕೆ ಬಸ್ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಹಾಗೂ ಕ್ಲೀನರ್ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

Moving sleeper bus gutted in blaze near Mumbalu village
Brake ಬದಲು Accelerator ಪ್ರೆಸ್: ಪೆಟ್ರೋಲ್ ಪಂಪ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ Jaguar; Video

ಸಾಗರದತ್ತ ತೆರಳುತ್ತಿದ್ದ ಮಾರ್ಗದಲ್ಲಿ ಆ ಸಮಯದಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಮಾತ್ರ ಬಸ್‌ನಲ್ಲಿದ್ದರು. ಶಿವಮೊಗ್ಗದಲ್ಲಿ ನಡೆದ ಹಿಂದಿನ ನಿಲುಗಡೆಯಲ್ಲೇ ಬಹುತೇಕ ಪ್ರಯಾಣಿಕರು ಬಸ್‌ನಿಂದ ಇಳಿದಿದ್ದರು ಎಂದು ತಿಳಿದುಬಂದಿದೆ.

ಬೆಂಕಿಯ ತೀವ್ರತೆಗೆ ಬಸ್‌ನ ಸುಮಾರು ಶೇ.80ರಷ್ಟು ಭಾಗ ಸುಟ್ಟುಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಆನಂದಪುರಂ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com