

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಶುಕ್ರವಾರ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಅಜಿತ್ (32), ರಾಕೇಶ(22), ಸಂದೀಪ್(33), ಶೃತಿ(28) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ನವಲಗುಂದ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.