ಮಹಾರಾಷ್ಟ್ರದಿಂದ ಭೀಮಾ ನದಿ ನೀರಿನ ದುರ್ಬಳಕೆಯಿಂದ ಕರ್ನಾಟಕಕ್ಕೆ ಸಂಕಷ್ಟ: ಹೋರಾಟಗಾರರ ಆರೋಪ

ಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದ ಬಚಾವತ್ ನ್ಯಾಯಮಂಡಳಿಯ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಅಥವಾ ಬಚಾವತ್ ತೀರ್ಪನ್ನು ಜಾರಿಗೊಳಿಸುವಂತೆ ಮಹಾರಾಷ್ಟ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿಲ್ಲ.
A stretch of Bhima River in Kalaburagi district, which has been drying up
ಕಲಬುರಗಿ ಜಿಲ್ಲೆಯಲ್ಲಿ ಬತ್ತಿಹೋಗುತ್ತಿರುವ ಭೀಮಾ ನದಿಯ ಒಂದು ಭಾಗ
Updated on: 

ಕಲಬುರಗಿ: ಮಹಾರಾಷ್ಟ್ರವು ಭೀಮಾ ನದಿ ನೀರನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಉತ್ತರ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಯ ಕೆಲವು ಭಾಗಗಳು ಆಗಾಗ್ಗೆ ಬರ ಅಥವಾ ಪ್ರವಾಹದ ಸಂಕಷ್ಟಕ್ಕೆ ಸಿಲುಕುತ್ತಿವೆ.

ಆದರೆ, ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅಗತ್ಯವಾದ ಮೂಲಸೌಕರ್ಯಗಳನ್ನು ನಿರ್ಮಿಸುವಲ್ಲಿಯೂ ಕರ್ನಾಟಕ ವಿಫಲವಾಗಿದೆ. ಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದ ಬಚಾವತ್ ನ್ಯಾಯಮಂಡಳಿಯ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಅಥವಾ ಬಚಾವತ್ ತೀರ್ಪನ್ನು ಜಾರಿಗೊಳಿಸುವಂತೆ ಮಹಾರಾಷ್ಟ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿಲ್ಲ.

A stretch of Bhima River in Kalaburagi district, which has been drying up
ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ

ಕೃಷ್ಣಾ ನದಿ ಹಾಗೂ ಅದರ ಪ್ರಮುಖ ಉಪ ನದಿಯಾದ ಭೀಮಾ ನದಿಯ ನೀರಿನ ಹಂಚಿಕೆ ವಿವಾದವನ್ನು ಬಗೆಹರಿಸಲು ರಚಿಸಲಾಗಿದ್ದ ನ್ಯಾಯಮೂರ್ತಿ ಬಚಾವತ್ ನೇತೃತ್ವದ ನ್ಯಾಯಮಂಡಳಿ 1976ರ ಮೇ 27ರಂದು ತನ್ನ ತೀರ್ಪು ಪ್ರಕಟಿಸಿತ್ತು. ಅದರಂತೆ ಮಹಾರಾಷ್ಟ್ರಕ್ಕೆ 95 ಟಿಎಂಸಿ ಅಡಿ, ಕರ್ನಾಟಕಕ್ಕೆ 15 ಟಿಎಂಸಿ ಅಡಿ ಹಾಗೂ ಅವಿಭಜಿತ ಆಂಧ್ರಪ್ರದೇಶಕ್ಕೆ 6 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಲಾಗಿತ್ತು.

ಆದರೆ, ಭೀಮಾ ನದಿಯ ಜಲಾನಯನ ಪ್ರದೇಶದಲ್ಲಿ ಸಾಮಾನ್ಯ ಮಳೆಯಾದಾಗಲೂ ಮಹಾರಾಷ್ಟ್ರವು ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡುವುದಿಲ್ಲ ಅಥವಾ ಅತ್ಯಲ್ಪ ಪ್ರಮಾಣದ ನೀರನ್ನು ಮಾತ್ರ ಹರಿಸುತ್ತದೆ. ಇದರಿಂದ ಕರ್ನಾಟಕದ ನಾಲ್ಕು ಜಿಲ್ಲೆಗಳು ಬರದ ಸಂಕಷ್ಟಕ್ಕೆ ಸಿಲುಕುತ್ತವೆ. ಅದೇ ಪ್ರದೇಶದಲ್ಲಿ ಭಾರಿ ಮಳೆಯಾದಾಗ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವ ಮೂಲಕ ಪ್ರವಾಹಕ್ಕೆ ಕಾರಣವಾಗುತ್ತದೆ.

A stretch of Bhima River in Kalaburagi district, which has been drying up
'ಮೂರು ಸಾವಿರ ಮಠನೋ ಆರು ಸಾವಿರ ಮಠನೋ; ನೀವೆಲ್ಲ ನನ್ನ ರಾಯಭಾರಿಗಳಾಗಿ ಸೇವೆ ಮಾಡಿದ್ರೆ ಮಾತ್ರ ನಿಮಗೆ ಮುಕ್ತಿ': ಸಿಎಂ ಡಿ.ಕೆ ಶಿವಕುಮಾರ್

ಈ ಸಮಸ್ಯೆಗೆ ಕರ್ನಾಟಕ ಹಾಗೂ ಕೇಂದ್ರ ಸರ್ಕಾರಗಳು ಇನ್ನೂ ಪರಿಹಾರ ಕಂಡುಕೊಳ್ಳದಿರಲು ಈ ಭಾಗದ ಜನಪ್ರತಿನಿಧಿಗಳಲ್ಲಿನ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಕಾವೇರಿ ನೀರಿಗಾಗಿ ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತವೆ. ಆದರೆ, ಭೀಮಾ ನದಿ ನೀರಿನ ವಿಚಾರದಲ್ಲಿ ರಾಜ್ಯ ಅಥವಾ ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹೇರುವ ಪ್ರಯತ್ನವನ್ನು ಅವು ಮಾಡುವುದಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಭೀಮಾ ನದಿ ನೀರಿಗಾಗಿ ನಾಲ್ಕು ಜಿಲ್ಲೆಗಳ ರೈತರ ಹೋರಾಟವನ್ನು ಮುನ್ನಡೆಸುತ್ತಿರುವ, ವಿಶೇಷವಾಗಿ ವಿಜಯಪುರ ಜಿಲ್ಲೆಯ ರೈತರ ಪರವಾಗಿ ನಿರಂತರವಾಗಿ ಹೋರಾಡುತ್ತಿರುವ ಹಾಗೂ ಬಚಾವತ್ ತೀರ್ಪು ದೊರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಂಚಪ್ಪ ಕಲಬುರಗಿ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ (TNIE) ಜೊತೆ ಮಾತನಾಡಿ, ಮಹಾರಾಷ್ಟ್ರಕ್ಕೆ ಭೀಮಾ ನದಿಯಿಂದ 95 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಲಾಗಿದ್ದರೂ, ಅಗತ್ಯ ಪ್ರಾಧಿಕಾರಗಳ ಅನುಮತಿಯಿಲ್ಲದೆ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಆ ರಾಜ್ಯವು 150 ಟಿಎಂಸಿ ಅಡಿಗೂ ಅಧಿಕ ನೀರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಅಲ್ಲದೆ, ಭೀಮಾ ನದಿಯ ನೀರನ್ನು ಸೀನಾ ನದಿಗೂ ತಿರುಗಿಸಲಾಗುತ್ತಿದೆ ಎಂದು ತಿಳಿಸಿದರು.

A stretch of Bhima River in Kalaburagi district, which has been drying up
ವಿಜಯಪುರದಲ್ಲಿ ಭೀಮಾ ನದಿ ತೀರದ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಜನರ ಅಕ್ರಮ ಪ್ರವೇಶ!

ಕರ್ನಾಟಕಕ್ಕೆ ನ್ಯಾಯಸಮ್ಮತವಾಗಿ ಹಂಚಿಕೆಯಾಗಿರುವ ನೀರು ನಿಯಮಿತವಾಗಿ ದೊರೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಭೀಮಾ ನದಿ ಹರಿಯುವ ಎಲ್ಲ ತಾಲ್ಲೂಕುಗಳಲ್ಲಿ ಭೀಮಾ ನದಿ ನೀರಿನ ಹೋರಾಟ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಪಂಚಪ್ಪ ಹೇಳಿದರು.

ರೈತರು 2002ರಲ್ಲಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕವು 15 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದರೂ, ಈವರೆಗೂ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ.

ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಈ ವಿಚಾರವಾಗಿ ಶೀಘ್ರದಲ್ಲೇ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com