ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

ಮುನ್ನ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಹಾಗೂ ಸಿಎಂ ಡಿ ಕೆ ಶಿವಕುಮಾರ್ ಮೆಟ್ಟಿಲುಗಳಲ್ಲಿ ನಮಸ್ಕಾರ ಮಾಡಿದರು.
Mysuru Dasara inauguration
ಮೈಸೂರು ದಸರಾ ಉದ್ಘಾಟನೆ
Updated on: 

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮೈಸೂರು ಚಾಮುಂಡಿ ಬೆಟ್ಟದ ದೇವಸ್ಥಾನದ ಪಕ್ಕದಲ್ಲಿ ಸಿದ್ಧಪಡಿಸಲಾದ ವಿಶೇಷ ವೇದಿಕೆಯಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು, ಸಿಎಂ ಡಿ.ಕೆ. ಶಿವಕುಮಾರ್​ ಶುಭ ಧನುರ್ ಲಗ್ನದಲ್ಲಿ ನಾಡ ಅಧಿದೇವತೆ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ಪೂಜೆ ಸಲ್ಲಿಸಿದ ನಂತರ ವೇದಿಕೆಯ ಬೆಳ್ಳಿ ರಥದ ಮೇಲಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಿದರು.

Mysuru Dasara inauguration
ಬರದ ನಡುವೆ ಮೈಸೂರು ದಸರಾಕ್ಕೆ ರಾಜವೈಭವದ ಮೆರುಗು; 11 ದಿನಗಳ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ

ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್​​, ಸಚಿವ ಯತೀಂದ್ರ ಸಿದ್ದರಾಮಯ್ಯ, ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ, ನೂರಾರು ಮಠಾಧೀಶರು ಹಾಗೂ ಧರ್ಮಗುರುಗಳು ಭಾಗಿಯಾಗಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ.

Mysuru Dasara inauguration
ದಸರಾ ಉದ್ಘಾಟನೆ ಮಾಡುತ್ತಿರುವ ಗವಿಮಠ ಗವಿಸಿದ್ದೇಶ್ವರ ಸ್ವಾಮೀಜಿಗಳ ಸಮಾಜಮುಖಿ ಕೆಲಸಗಳೇನು?

ಇದಕ್ಕೂ ಮುನ್ನ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಹಾಗೂ ಸಿಎಂ ಡಿ ಕೆ ಶಿವಕುಮಾರ್ ಮೆಟ್ಟಿಲುಗಳಲ್ಲಿ ನಮಸ್ಕಾರ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com