ಬೆಂಗಳೂರು ದಕ್ಷಿಣ ಜಿಲ್ಲೆ: ಮಾಗಡಿ ಬಳಿ ಚಿರತೆ ದಾಳಿಗೆ ಪ್ರಾಣ ಬಿಟ್ಟ ರೈತ!

ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
shivaswamy
ಮೃತ ರೈತ ಶಿವಸ್ವಾಮಿ
Updated on: 

ಮಾಗಡಿ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಹಾರ ಅರಸಿ ಕಾಡಿನಿಂದ ನಾಡಿಗೆ ಬರುತ್ತಿರುವ ವನ್ಯಜೀವಿಗಳು, ಮನುಷ್ಯರನ್ನು ಬಲಿಪಡೆಯುತ್ತಿವೆ.

ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಹಾದೇಶ್ವರ ಸ್ವಾಮಿ ದೇವಾಲಯದ ಅರ್ಚಕ ಹಾಗೂ ಪ್ರಗತಿ ಪರ ರೈತ ಶಿವಸ್ವಾಮಿ ಮೃತ ದುರ್ದೈವಿ.

ತಮ್ಮ ತೋಟದಲ್ಲಿ ಕಾಕಡ ಹೂ ಬಿಡಿಸಲು ಸೋಮವಾರ ಮುಂಜಾನೆ ತೆರಳಿದಾಗ ಇವರ ಮೇಲೆ ಚಿರತೆಯೊಂದು ಹಠಾತ್ ಎರಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಶಿವಸ್ವಾಮಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

shivaswamy
ದಾವಣಗೆರೆ: ಹೆದ್ದಾರಿ ಅಪಘಾತದಲ್ಲಿ ಚಿರತೆ ಗಂಭೀರ ಗಾಯ; ರಕ್ಷಣೆಗೆ ಹೋದ ಸಿಬ್ಬಂದಿ ಮೇಲೆ ದಾಳಿ; Video

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಮಾಗಡಿ ತಾಲೂಕಿನಲ್ಲಿ ಚಿರತೆ ಹಾವಳಿಯಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅರಣ್ಯ ಇಲಾಖೆ ಕ್ರಮ ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com