ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ 'ಸ್ಟಿಂಗ್ ಆಪರೇಷನ್' (ನಕಲಿ ರಹಸ್ಯ ಕಾರ್ಯಾಚರಣೆ) ಕುರಿತಾದ ವದಂತಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
Siddaramaiah
ಸಿದ್ದರಾಮಯ್ಯ
Updated on: 

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ 'ಸ್ಟಿಂಗ್ ಆಪರೇಷನ್' (ನಕಲಿ ರಹಸ್ಯ ಕಾರ್ಯಾಚರಣೆ) ಕುರಿತಾದ ವದಂತಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ತಮ್ಮ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ವಿವರಿಸಿದ ಸಿದ್ದರಾಮಯ್ಯ, ಇದೇ ಕಾರಣಕ್ಕೆ ತಾವು ನ್ಯಾಯಾಲಯದಿಂದ ತಡೆಯಾಜ್ಞೆ ಕೋರಿದ್ದಾಗಿ ತಿಳಿಸಿದರು.

ಸಿಇಸಿ (CEC) ಮತ್ತು ಎಸ್‌ಐಆರ್ (SIR) ವಿರುದ್ಧ ನವದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ತಾವು ಭಾಗವಹಿಸದಿರುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಡಿ.ಕೆ ಶಿವಕುಮಾರ್ ಅವರೊಂದಿಗೆ ಸೇರಿಕೊಳ್ಳಲು ಯೋಜಿಸಿದ್ದರೂ, ಬೆಂಗಳೂರಿನಲ್ಲಿ ಮೊದಲೇ ನಿಗದಿಯಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭವಿದ್ದ ಕಾರಣ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

Siddaramaiah
CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com