ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Pratap Simha
ಮಾಜಿ ಸಂಸದ ಪ್ರತಾಪ್ ಸಿಂಹ
Updated on: 

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಬಂಧನದ ಭೀತಿ ಎದುರಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಗಣೇಶ ವಿಸರ್ಜನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಾಪ್​ ಸಿಂಹ ಅವರ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Pratap Simha
ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಈ ಸಂಬಂಧ ಟಿ. ನರಸೀಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ್ದರು. ಇದೀಗ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ ಆಗಿದ್ದು, ಮಾಜಿ ಸಂಸದ ಪ್ರತಾಪ್​ ಸಿಂಹ ಅವರಿಗೆ ಬಂಧನ ಭೀತಿ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com